ಕರಾವಳಿ

ಯುವ ಮತದಾರರಲ್ಲಿ ಮೋದಿ ಪರ ಹೆಚ್ಚಿದ ಒಲವು – ಮೋದಿಯವರು ಪ್ರಧಾನಿಯಾಗುವುದು ನಿಶ್ಚಿತ : ಶಾಸಕ ಕಾಮಾತ್

Pinterest LinkedIn Tumblr

ಮಂಗಳೂರು : ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಬೆಂಬಲಿಸಿ ದ ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಪರವಾಗಿ ಚುನಾವಣಾ ಪ್ರಚಾರ ಮೆ ಭೀ ಚೌಕಿಧಾರ ವಿದ್ಯಾರ್ಥಿಗಳ ಅಭಿಯಾನ ಕಾರ್ಯಕ್ರಮ ಶುಕ್ರವಾರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು.

ಮಂಗಳೂರು ಎಸ್.ಡಿ.ಎಂ ಕಾನೂನು ಕಾಲೇಜು ಬಳಿಯಿಂದ ಕ್ಲಾಕ್ ಟವರ್ ವರಗೆ ನಡೆದ ಮೆ ಭೀ ಚೌಕಿಧಾರ ವಿದ್ಯಾರ್ಥಿಗಳ ಅಭಿಯಾನ ಕಾರ್ಯಕ್ರಮದಲ್ಲಿ ಸುಮಾರು 500 ಕ್ಕೂ ಅಧಿಕ ಯುವ ಮತದಾರರು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದರು.

ಈ ವೇಳೆ ಯುವ ಮತದಾರರನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ಯುವ ಮತದಾರರ, ವಿದ್ಯಾರ್ಥಿಗಳ ಒಲವು ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಪರವಾಗಿದ್ದು, ಈ ಬಾರಿ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ನಿಶ್ಚಿತ ಎಂದು ಹೇಳಿದರು.

Comments are closed.