ಕರಾವಳಿ

ಉರ್ವಾ ಪೊಲೀಸರಿಂದ ಮೂವರು ಕ್ರಿಕೆಟ್ ಬುಕ್ಕಿಗಳ ಸೆರೆ

Pinterest LinkedIn Tumblr

ಮಂಗಳೂರು : ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಕ್ಕೆ ಸಂಬಂಧಪಟ್ಟಂತೆ ಮೂವರು ಬುಕ್ಕಿಗಳನ್ನು ಮಂಗಳೂರು ಪೊಲೀಸರು ಬಂಧಿಸಿ ನಗದು ಸಹಿತಾ 11620 ರೂ,ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟೆಯ ಹಾಜಿ ಇಸ್ಮಾಯಿಲ್ (26), ಮಂಗಳೂರಿನ ಅಡ್ಯಾರ್ ಒಳಚಿಲ್ ನ ಇಸ್ಮಾಯಿಲ್ (65) ಹಾಗೂ ಬೆಳ್ತಂಗಡಿಯ ಜೋಸೆಫ್ (27) ಬಂಧಿತ ಆರೋಪಿಗಳು.

ಮಂಗಳೂರಿನ ಬಿಜೈ ಕೆ.ಎಸ್.ಆರ್.ಟಿಸಿ ಸಮೀಪದ ಅನಲಾ ಲಾಡ್ಜ್ ನಲ್ಲಿ ಕ್ರಿಕೆಟ್ ಲೈವ್ ಬಜ್ ಎಂಬ ಆಪ್ ಮೂಲಕ ಇಸ್ಮಾಯಿಲ್, ಹಾಜಿ ಇಸ್ಮಾಯಿಲ್ ಹಾಗೂ ಜೋಸೆಫ್ ಬೆಟ್ತಿಂಗ್ ನಡೆಸುತ್ತಿದ್ದರು. ಈ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳಿಂದ ಮೊಬೈಲ್ ಗಳು ಹಾಗೂ ಸಾರ್ವಜನಿಕರಿಂದ ಅಕ್ರಮವಾಗಿ ಬೆಟ್ಟಿಂಗ್ ಮೂಲಕ ಸಂಗ್ರಹಿಸಿದ ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉರ್ವ ಠಾಣಾ ಸರಹದ್ದಿನ ಬಿಜೈ ಅನಲಾ ಲಾಡ್ಜ್ ನಲ್ಲಿ ರೂಂ ಒಂದರಲ್ಲಿ ಹಾಜಿ ಇಸ್ಮಾಯಿಲ್, ಇಸ್ಮಾಯಿಲ್ ಮತ್ತು ಜೋಸೆಫ್ ಎಂಬವರು CRICKET LIVE BUZZ ಎಂಬ Mobile App ನಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೇಂಜರ್ಸ್ ಬೆಂಗಳೂರು ಮಧ್ಯೆ ನಡೆಯುತ್ತಿರುವ ಐ.ಪಿ.ಎಲ್. ಟಿ20 ಪಂದ್ಯಕ್ಕೆ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಬಗ್ಗೆ ದೊರೆತ ಖಚಿತ ವರ್ತಮಾನದಂತೆ ಉರ್ವ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳು ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಗೆ ಉಪಯೋಗಿಸುತ್ತಿದ್ದ ಮೂರು ಮೊಬೈಲ್ ಹಾಗೂ ಸಾರ್ಜನಿಕರಿಂದ ಅಕ್ರಮ ಬೆಟ್ಟಿಂಗ್ ದಂಧೆಗೆ ಸಂಗ್ರಹಿಸಿದ್ದ ರೂ. 1320 ನಗದು ಹಣ ಸೇರಿ ರೂ. 11620 ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉರ್ವಾ ಠಾಣಾ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಇವರ ನಿರ್ದೇಶನದಂತೆ ಮಂಗಳೂರು ನಗರ ಪೊಲೀಸ್ ಉಪ ಆಯುಕ್ತರುಗಳಾದ ಹನುಮಂತರಾಯ (L&O) ಮತ್ತು ಶ್ರೀಮತಿ ಉಮಾ ಪ್ರಶಾಂತ್ (Crime & Traffic) ಇವರ ಮಾರ್ಗದರ್ಶನದಂತೆ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಸುಧೀರ್ ಹೆಗ್ಡೆ ಇವರ ನೇತ್ರತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉರ್ವ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಗುರುಪ್ರಸಾದ್.ಎ, ಪೊಲೀಸ್ ಉಪನಿರೀಕ್ಷಕರಾದ ಶ್ರೀಮತಿ ವನಜಾಕ್ಷಿ.ಕೆ, ಪ್ರೊಫೆಶನರಿ ಪಿ.ಎಸ್.ಐ ಹರೋನ್ ಅಖ್ತರ್ ಹಾಗೂ ಠಾಣಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Comments are closed.