ಕರಾವಳಿ

ದೇಶದ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು : ನಳಿನ್ ಕುಮಾರ್ ಕಟೀಲ್

Pinterest LinkedIn Tumblr

ಮಂಗಳೂರು : ದೇಶದ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ಅವರ ಕೈ ಬಲಪಡಿಸುವ ಅಗತ್ಯ ಇದೆ. ದೇಶದ ರಕ್ಷಣೆ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಕಮಲದ ಚಿನ್ನೆಗೆ ಮತ ಹಾಕಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರು ವಿಧಾನಸಭಾ ಕ್ಷೇತ್ರದ ಕೊಣಾಜೆ ಶಕ್ತಿಕೇಂದ್ರ ಅಸೈಗೊಳಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಈ ಬಾರಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಯಾಗುವುದು ನಿಶ್ಚಿತ. 2020ರಲ್ಲಿ ಭಾರತ ವಿಶ್ವ ಗುರುವಾಗಿ ಎದ್ದು ನಿಲ್ಲುತ್ತದೆ ಎಂಬ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಭವಿಷ್ಯವನ್ನು 2019ರಲ್ಲಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವ ಮೂಲಕ ನೂರುಕ್ಕೆ ನೂರು ಸಕಾರಗೊಳಿಸುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಸಭೆಯ ವೇದಿಕೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್, ಪಕ್ಷದ ಮುಖಂಡರಾದ ಬದ್ರಿನಾಥ್ ಕಾಮತ್, ರವೀಂದ್ರ ಶೆಟ್ಟಿ ಉಳಿದೋಟ್ಟು, ಚಂದ್ರಹಾಸ ಉಳ್ಳಾಲ್, ಸತೀಶ್ ಕುಂಪಲ, ಧನಲಕ್ಷ್ಮೀ ಘಟ್ಟಿ, ಜಯರಾಮ್ ಶೆಟ್ಟಿ, ಸೀತಾರಾಮ್ ಶೆಟ್ಟಿ, ಮೋಹನ್ ರಾಜ್ ಕೋಟೆಕಾರ್ ಇನ್ನಿತರ ನಾಯಕರು ಹಾಗೂ ಬೃಹತ್ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.