ಕರಾವಳಿ

ಮಂಗಳೂರಿಗೆ ಪ್ರಧಾನಿ ಆಗಮನ ಹಿನ್ನೆಲೆ : ನಗರಾದ್ಯಂತ ಬಿಗಿ ಬಂದೋಬಸ್ತ್

Pinterest LinkedIn Tumblr

ಮಂಗಳೂರು, ಎಪ್ರಿಲ್.11: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಎ.13ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎ.13ರಂದು ನಗರಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಐವರು ಎಸ್ಪಿ/ಡಿಸಿಪಿ, 10 ಡಿವೈಎಸ್ಪಿ/ಎಸಿಪಿ, 36 ಪೊಲೀಸ್ ಇನ್‌ಸ್ಪೆಕ್ಟರ್, 67 ಪಿಎಸ್ಸೈ, 147 ಎಎಸ್ಸೈ, 1,207 ಹೆಡ್ ಕಾನ್‌ಸ್ಟೇಬಲ್/ಪಿ.ಸಿ. ಸೇರಿದಂತೆ ಒಟ್ಟು 1472 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ. ಇದಲ್ಲದೆ 92 ಎಚ್.ಜಿ., 5 ಕೆಎಸ್.ಆರ್.ಪಿ. ತುಕಡಿ, 19 ಸಿ.ಎ.ಆರ್ ತುಕಡಿ ಹಾಗೂ 2 ಸಿ.ಆರ್.ಪಿ.ಎಫ್. ತುಕಡಿಗಳ ಅಧಿಕಾರಿ ಮತ್ತು ಸಿಬ್ಬಂದಿ ಅಂದು ಕರ್ತವ್ಯದಲ್ಲಿರುವರು. ಕಾರ್ಯಕ್ರಮ ನಡೆಯುವ ಸ್ಥಳ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಪ್ರಧಾನಿ ಸಂಚರಿಸುವ ಸ್ಥಳಗಳ ತಪಾಸಣೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ಆಯುಕ್ತರು ತಿಳಿಸಿದ್ದಾರೆ.

ಕಾರ್ಯಕ್ರಮ ನಡೆಯುವ ನೆಹರೂ ಮೈದಾನದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಹೋಟೆಲ್/ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಿ ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗುತ್ತಿದೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ತೀವ್ರ ತಪಾಸಣೆ ಮತ್ತು ನಿಗಾ ವಹಿಸಲಾಗಿದೆ ಎಂದು ಆಯುಕ್ತರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

Comments are closed.