ಕರಾವಳಿ

ಪ್ರಧಾನಿ ಮೋದಿ ನಾಳೆ ಮಂಗಳೂರಿಗೆ ; ಬಿಜೆಪಿ ಮುಖಂಡರಿಂದ ಅಂತಿಮ ಹಂತದ ಸಿದ್ಧತೆಗಳ ಪರಿಶೀಲನೆ

Pinterest LinkedIn Tumblr

ಮಂಗಳೂರು, ಎಪ್ರಿಲ್ 12 : ಪ್ರಧಾನಿ ನರೇಂದ್ರ ಮೋದಿ ಅವರು ಎ.13ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಆಗಮಿಸಲಿದ್ದು, ಅಂತಿಮ ಹಂತದ ಸಿದ್ಧತೆ ನಡೆಸಲಾಗುತ್ತಿದೆ. ಪೂರ್ಣ ಬಂದೋಬಸ್ತ್ ನಿಯೋಜಿಸಲಾಗಿದೆ.

ಇದೇ ವೇಳೆ ನಗರದ ಕೇಂದ್ರ ಮೈದಾನದಲ್ಲಿ ನಾಳೆ ನಡೆಯಲಿರುವ ಮಾನ್ಯ ನರೇಂದ್ರ ಮೋದಿಯವರ ಚುನಾವಣಾ ಸಾರ್ವಜನಿಕ ಕಾರ್ಯಕ್ರಮದ ವ್ಯವಸ್ಥೆ ಬಗ್ಗೆ ಮೇಲ್ವಿಚಾರಣೆ ವಹಿಸಿರುವ ಮೋದಿ ರ್‍ಯಾಲಿಯ ಸಂಚಾಲಕ ಶಾಸಕ ಸುನಿಲ್ ಕುಮಾರ್, ಶಾಸಕರಾದ ಡಾ. ಭರತ್ ಶೆಟ್ಟಿ ವೈ , ವೇದವ್ಯಾಸ್ ಕಾಮತ್ ಹಾಗೂ ಮತ್ತಿತರ ಪಕ್ಶ್ಜದ ಪದಾಧಿಕಾರಿಗಳು ಶುಕ್ರವಾರ ಸಂಜೆ ಕೇಂದ್ರ ಮೈದಾನದಲ್ಲಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

ಬಳಿಕ ಕಾರ್ಯಕ್ರಮದ ವ್ಯವಸ್ಥೆಗಳ ಬಗ್ಗೆ ವಿವರಗಳನ್ನು ಪತ್ರಿಕಾ ಮಾಧ್ಯಮದವರಿಗೆ ನೀಡಿದರು. ಹಾಲಿ ಸಂಸದ ಹಾಗೂ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್, ವಿಧಾನ ಪರಿಷತ್ ನ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪಕ್ಷದ ಪ್ರಮುಖರಾದ ನಿತಿನ್ ಕುಮಾರ್, ಕಿಶೋರ್ ಕುಮಾರ್ ಹಾಗೂ ಮತ್ತಿತ್ತರ ಪ್ರಮುಖರು ಉಪಸ್ಥಿತರಿದ್ದರು.

Comments are closed.