ಕರಾವಳಿ

ಮಂಗಳೂರು ಕೇಂದ್ರ ಮೈದಾನದ ಇಂದಿನ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ

Pinterest LinkedIn Tumblr

ಮಂಗಳೂರು, ಎಪ್ರಿಲ್.13 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು (ಏಪ್ರಿಲ್ 13) ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದರಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ.

ಭದ್ರತೆಯ ಕಾರಣಕ್ಕಾಗಿ ಕೆಲವು ವಿಐಪಿಗಳಿಗೆ ಪಾಸ್‍ನ ವ್ಯವಸ್ಥೆ ಮಾಡಲಾಗಿದೆ. ಆದರೆ ಸಾರ್ವಜನಿಕರು ಬಂದು ಮುಕ್ತವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವ್ಯವಸ್ಥೆ ಮಾಡಲಾಗಿದೆ. ವಿಶ್ವ ನಾಯಕನಾಗಿ ಗುರುತಿಸಿಕೊಂಡಿರುವ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ನೇರವಾಗಿ ವೀಕ್ಷಿಸಿ, ಅವರ ಮಾತುಗಳನ್ನು ನೇರವಾಗಿ ಆಲಿಸುವ ಅವಕಾಶ ಇದಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಭಾರತೀಯ ಜನತಾ ಪಾರ್ಟಿಯ ಪ್ರಕಟಣೆ ತಿಳಿಸಿದೆ.

Comments are closed.