ಕರಾವಳಿ

ಮಂಗಳೂರು : ಬೆಳ್ಳಂಬೆಳಿಗ್ಗೆ ಕಿಡಿಗೇಡಿಗಳಿಂದ ಬಸ್ಸಿಗೆ ಬೆಂಕಿ

Pinterest LinkedIn Tumblr

ಮಂಗಳೂರು, ಎಪ್ರಿಲ್. 14: ಗುಜರಿ ಅಂಗಡಿ ಮುಂದೆ ಗುಜರಿಗೆ ನಿಲ್ಲಿಸದ್ದ ಬಸ್ಸೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಇಂದು ಮುಂಜಾನೆ 5 ಗಂಟೆಯ ಸುಮಾರಿಗೆ ಮಂಗಳೂರಿನ ಹೊರವಲಯದ ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯ ಬಳಿಯಲ್ಲಿ ನಡೆದಿದೆ.

ಘಟನೆಯಿಂದ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬೆಂಕಿಯ ಕೆನ್ನಾಲಗೆ ಪಕ್ಕದಲ್ಲಿ ನಿಲ್ಲಿಸಿದ ಜೀಪೊಂದಕ್ಕೂ ತಗಲಿ ಜೀಪ್ ಕೂಡ ಬೆಂಕಿಗಾಹುತಿಯಾಗಿದೆ. ಬಳಿಕ ತಡವಾಗಿ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದರು.

ಕರೆ ಸ್ವೀಕರಿಸಿದ ಸಿಬ್ಬಂದಿ : ಸ್ಥಳೀಯರ ಆಕ್ರೋಷ

ಘಟನೆ ನಡೆದ ಸಂದರ್ಭ ಕಂಕನಾಡಿ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದು, ಆದರೆ ಸುಮಾರು 45 ನಿಮಿಷಗಳ ಕಾಲ ದೂರವಾಣಿ ಕರೆ ಮಾಡಿದರೂ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕರೆ ಸ್ವೀಕರಿಸದೇ ಇದ್ದುದ್ದರಿಂದ ಸ್ಥಳೀಯರ ಆಕ್ರೋಷ ವ್ಯಕ್ತಪಡಿಸಿದ್ದಾರೆ. ದಟ್ಟವಾಗಿ ಹಬ್ಬಿದ ಬೆಂಕಿ ಸುತ್ತಮುತ್ತಲಿನ ಪ್ರದೇಶಕ್ಕೆ ವ್ಯಾಪಿಸುವ ಸಾಧ್ಯತೆಗಳಿದ್ದರಿಂದ ಸ್ಥಳೀಯರು ಆತಂಕಕೀಡಾಗಿದ್ದರು. ಬಳಿಕ ಪಾಂಡೇಶ್ವರ ಪೊಲೀಸ್ ಠಾಣೆಗೆ ಕರೆ ಮಾಡಿ ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡುವಂತೆ ತಿಳಿಸಿಲಾಯಿತು. ಬಳಿಕ ತಡವಾಗಿ ೬.೨೦ರ ಸುಮಾರಿಗೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದರು.

Comments are closed.