ಕರಾವಳಿ

ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾರಿಗೆ ಸಿಎ ಆಗುವ ಕನಸು

Pinterest LinkedIn Tumblr

ಮಂಗಳೂರು, ಏಪ್ರಿಲ್ 15: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಕರಾವಳಿ ಜಿಲ್ಲೆಗಳಾದ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ (596) ಹಾಗೂ ವಿಟ್ಲದ ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ಪಿಯು ಕಾಲೇಜಿನ ಶ್ರೀಕೃಷ್ಣ ಶರ್ಮ ಕೆ. ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.ಅದೇ ರೀತಿ ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಯಾಲ್ ಬೈಲಿನ ಕೆನರಾ ಕಾಲೇಜಿನ ಶ್ರೀಯಾ ಶೆಣೈ 595 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಇಂದು ಪ್ರಕಟವಾದ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ‌ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿನಿ ಓಲ್ವಿಟ ಆನ್ಸಿಲ ಡಿಸೋಜ ವಾಣಿಜ್ಯ ವಿಭಾಗದಲ್ಲಿ 596 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಬ್ಯುಸಿನೆಸ್ ಸ್ಟಡೀಸ್, ಅಕೌಂಟ್, ಬೇಸಿಕ್ ಮ್ಯಾಥ್ಸ್, ಸ್ಟಾಟಿಸ್ಟಿಕ್ ತಲಾ‌ 100 ಅಂಕ , ಇಂಗ್ಲಿಷ್ ಮತ್ತು ಹಿಂದಿಯಲ್ಲಿ 98 ಅಂಕ ಪಡೆದಿದ್ದಾರೆ. ಡಾ. ಮೋಹನ್ ಆಳ್ವಾ, ವಿದ್ಯಾರ್ಥಿನಿಗೆ ಸಿಹಿ ನೀಡುವ ಮೂಲಕ ಅಭಿನಂದಿಸಿದರು.

ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ.ಪರೀಕ್ಷೆಗಾಗಿ ತುಂಬಾ ಕಷ್ಟಪಟ್ಟು ಓದುವ ಬದಲು ಪ್ಲಾನ್ ಮಾಡಿ ಯೋಜನೆ ಪ್ರಕಾರವಾಗಿ ಓದಿರುವುದು ಫಲ ನೀಡಿದೆ.ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಮುಂದೆ ಸಿಎ ಓದುವುದಾಗಿ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ ಸುದ್ಧಿಗಾರರಲ್ಲಿ ತಿಳಿಸಿದ್ದಾರೆ.

Comments are closed.