ಕರಾವಳಿ

ದ.ಕ.ಜಿಲ್ಲಾ ಮತದಾನ ಕೇಂದ್ರಲ್ಲಿ ಮೊಬೈಲ್ ಬಳಕೆ ನಿಷೇಧ : ಮತದಾನ ಕೇಂದ್ರಗಳಿಗೆ ಮೊಬೈಲ್ ಕೊಂಡೊಯ್ಯುವಂತಿಲ್ಲ

Pinterest LinkedIn Tumblr

ಮಂಗಳೂರು, ಎಪ್ರಿಲ್.17: ನಾಳೆ ನಡೆಯಲಿರುವ ಮತದಾನ ವೇಳೆ ದ.ಕ.ಜಿಲ್ಲಾ ಮತದಾನ ಕೇಂದ್ರಲ್ಲಿ ಮೊಬೈಲ್ ಉಪಯೋಗವನ್ನು ನಿಷೇಧಿಸಲಾಗಿದೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ- 2019ರ ಹಿನ್ನೆಲೆಯಲ್ಲಿ ಎಪ್ರಿಲ್ 18ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮತದಾನ ನಡೆಯಲಿರುವುದರಿಂದ ಚುನಾವಣಾ ಸಂದರ್ಭದಲ್ಲಿ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಮತದಾನ ಮಾಡಲು ಮತದಾನ ಕೇಂದ್ರಗಳಿಗೆ ಮೊಬೈಲ್ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲೂ ಈ ವಿಷಯ ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿಗಳು, ಪಿಆರ್‌ಒ ಮಾತ್ರ ಮೊಬೈಲ್‌ನ್ನು ಮತದಾನ ಕೇಂದ್ರದಲ್ಲಿ ಇಟ್ಟುಕೊಳ್ಳಲು ಅವಕಾಶವಿದ್ದು ಇತರರಿಗೆ ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ ಎಂದು ಹೇಳಿದ್ದಾರೆ.

Comments are closed.