
ಮಂಗಳೂರು, ಎಪ್ರಿಲ್.18 ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ನಗರದ ಬಲ್ಮಠ ಸರಕಾರಿ ಮಹಿಳಾ ಪಿಯು ಕಾಲೇಜಿನ ಮತದಾನಕೇಂದ್ರದಲ್ಲಿ ಗುರುವಾರ ಬೆಳಗ್ಗೆ ಮತದಾನ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 1861 ಮತಗಟ್ಟೆಗಳಲ್ಲಿ ಏಕಕಾಲಕ್ಕೆ ಸರಿಯಾಗಿ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಪ್ರತಿಯೊಬ್ಬರು ಸರತಿ ಸಾಲಿನಲ್ಲಿ ನಿಂತು ಮತದಾರರು ಮತ ಚಲಾಯಿಸಿದರು. ಮುಂಜಾನೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಜನರು ಆಗಮಿಸುತ್ತಿರುವುದು ಕಂಡು ಬಂದಿದೆ.


ಬೆಳಿಗ್ಗೆ ಏಳು ಗಂಟೆಗೆ ನಗರದ ಬಲ್ಮಠ ಸರಕಾರಿ ಮಹಿಳಾ ಪಿಯು ಕಾಲೇಜಿನ ಮತದಾನಕೇಂದ್ರಕ್ಕೆ ಆಗಮಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.
ಹಿಂದುತ್ವ ಹಾಗೂ ಬಿಲ್ಲವರ ವೋಟಿನ ಮೇಲೆ ಕಣ್ಣಿಟ್ಟಿರುವ ಮಿಥುನ್ ರೈ ಮತಯಾಚನೆ ಸಂದರ್ಭ ಕೆಲವೆಡೆಗಳಲ್ಲಿ ಕೇಸರಿ ಸಾಲು ಧರಿಸಿ ಬಿಜೆಪಿ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ ಮತದಾನ ಸಂದರ್ಭದಲ್ಲೂ ಹೆಗಲ ಮೇಲೆ ಕೇಸರಿ, ಹಳದಿ ಶಾಲು ಹಾಕಿ ಮತದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 17,24, 460 ಮತದಾರರಿದ್ದಾರೆ. ಈ ಪೈಕಿ 8,79,050 ಮಹಿಳಾ ಮತದಾರರಾದರೆ , 8,45,308 ಪುರುಷ ಮತದಾರರಿದ್ದಾರೆ. ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ.
Comments are closed.