ಕರಾವಳಿ

ಒಂದು ಗಂಟೆಗೂ ಹೆಚ್ಚು ಕಾಲ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಶಾಸಕ ಕಾಮಾತ್

Pinterest LinkedIn Tumblr

ಮಂಗಳೂರು, ಎಪ್ರಿಲ್.18: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಗ್ಗೆ ಏಳು ಗಂಟೆಗೆ ಚುನಾವಣೆ ಆರಂಭಗೊಂಡಿದ್ದು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮಾತ್ ಅವರು ಬೆಳಿಗ್ಗೆ 7 ಗಂಟೆಗೆ ನಗರದ ಉರ್ವಾ ಗಾಂಧೀನಗರ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 1861 ಮತಗಟ್ಟೆಗಳಲ್ಲಿ ಏಕಕಾಲಕ್ಕೆ ಸರಿಯಾಗಿ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಪ್ರತಿಯೊಬ್ಬರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಮುಂಜಾನೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಜನರು ಆಗಮಿಸಿದ್ದರು. ಬೆಳಿಗ್ಗೆ ಏಳು ಗಂಟೆಗೆ ತಮ್ಮ ಪತ್ನಿಯೊಂದಿಗೆ ಗಾಂಧೀನಗರ ಶಾಲೆಯ ಮತಗಟ್ಟೆಗೆ ಬಂದ ಶಾಸಕ ವೇದವ್ಯಾಸ ಕಾಮಾತ್ ಅವರು ಒಂದು ಗಂಟೆಗೂ ಹೆಚ್ಚು ಕಾಲ ಎಲ್ಲರ ಜೊತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಇದೇ ವೇಳೆ ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಅವರು ಲೇಡಿಹೀಲ್ ವಿಕ್ಟೋರಿಯಾ ಮಹಿಳಾ ಶಾಲೆಯಲ್ಲಿ ಬೆಳಿಗ್ಗೆ ಮತ ಚಲಾಯಿಸಿದರು.ಪುತ್ತೂರು ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಇವರು ಪುತ್ತೂರಿನಲ್ಲಿ ಮತ ಚಲಾಯಿಸಿದರು.

Comments are closed.