ಕರಾವಳಿ

ಜೂನ್ 2ರಂದು 4ನೇ ವರ್ಷದ `ಪಟ್ಲ ಸಂಭ್ರಮ’ :ಆಮಂತ್ರಣ ಪತ್ರಿಕೆ ಬಿಡುಗಡೆ

Pinterest LinkedIn Tumblr

ಮಂಗಳೂರು: ಸರಕಾರ ಮಾಡುವ ಕೆಲಸವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಾಡುತ್ತಿದೆ. ಕಲಾವಿದರ ಕುರಿತು ಭಾಗವತ ಸತೀಶ್ ಶೆಟ್ಟಿ ಅವರಿಗಿರುವ ಕಾಳಜಿ ಪ್ರಶಂಸನೀಯ. ಈ ನಿಟ್ಟಿನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕೈಗೊಳ್ಳುವ ಕೆಲಸ ಕಾರ್ಯಗಳಿಗೆ ಕಲಾಭಿಮಾನಿಗಳು ಕೈಜೋಡಿಸುವ ಅಗತ್ಯ ಇದೆ ಎಂದು ಕಾರ್‌ಡೆಕಾರ್‌ನ ಮಾಲಕ, ಚಲನ ಚತ್ರ ನಿರ್ಮಾಪಕ ಮುಖೇಶ್ ಹೆಗ್ಡೆ ಹೇಳಿದರು.

ಬಲ್ಲಾಲ್ ಬಾಗ್‌ನಲ್ಲಿರುವ ಪತ್ತುಮುಡಿ ಸಭಾಂಗಣದಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಹೋಟೇಲ್ ಉದ್ಯಮಿ ಕೃಷ್ಣ ಶೆಟ್ಟಿ ಬೈಕಂಪಾಡಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿಸಮಾಜ ಸೇವಕ ರಮಾನಾಥ ಶೆಟ್ಟಿ ಬೈಕಂಪಾಡಿ ಭಾಗವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ವಹಿಸಿದ್ದರು. ಜೂನ್ 2ರಂದು ಭಾನುವಾರ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯುವ 4ನೇ ವರ್ಷದ ಪಟ್ಲ ಸಂಭ್ರಮ ಕಾರ್ಯಕ್ರಮದ ಕುರಿತು ಸಭೆಗೆ ಮಾಹಿತಿ ನೀಡಿದರು.

ಸಮಾರಂಭದಲ್ಲಿ 2019ರ ಸಾಲಿನ ಪಟ್ಲ ಪ್ರಶಸ್ತಿ ಹಾಗೂ ಎಂಟು ಮಂದಿ ಕಲಾವಿದರಿಗೆ ಯಕ್ಷಧ್ರುವ ಕಲಾಗೌರವ ಪ್ರಶಸ್ತಿ ಕುರಿತು ವಿವರಿಸಿದರು. ಸಮಾರಂಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಅಳವಡಿಸಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ್ ಶೆಟ್ಟಿ ತಿಳಿಸಿದರು.

ಸಮಾರಂಭದಲ್ಲಿ ನಿಟ್ಟೆಗುತ್ತು ರವಿರಾಜ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಕೇಂದ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿ.ಎ. ಸುದೇಶ್ ಕುಮಾರ್, ಉಪಾಧ್ಯಕ್ಷ ಮನುರಾವ್, ಜತೆ ಕಾರ್ಯದರ್ಶಿರಾಜೀವ ಪೂಜಾರಿ ಕೈಕಂಬ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಗಿರೀಶ್ ಎಂ.ಶೆಟ್ಟಿ ಕಟೀಲ್, ಪ್ರೇಮನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಪಿ.ಆರ್. ಶೆಟ್ಟಿ, ಚಂದ್ರಶೇಖರ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

ಪುರುಷೋತ್ತಮ ಭಂಡಾರಿ ಸ್ವಾಗತಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ವಂದಿಸಿದರು.

Comments are closed.