ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘದ ತಾಲೂಕು ಸಮಿತಿಯ ಸಹಯೋಗದೊಂದಿಗೆ ‘ಬಿಸು ಸಮ್ಮಿಲನ 2019’ ಕಾರ್ಯಕ್ರಮವನ್ನು ಹಿರಿಯ ವೈದ್ಯರಾದ ಡಾ. ಬಿ.ಎಂ ಹೆಗ್ಡೆ ಉದ್ಘಾಟಿಸಿದರು.
ಬಂಟ ಸಮುದಾಯದಿಂದ ಸಮಾಜಕ್ಕೆ ಒಳ್ಳೆಯ ಕೊಡುಗೆಗಳು ಸಲ್ಲಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು ಎಂದು ಡಾ. ಬಿ.ಎಂ ಹೆಗ್ಡೆ ಶುಭ ಹಾರೈಸಿದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ನಮ್ಮ ಹಿರಿಯರು ತಲೆತಲಾಂತರದಿಂದ ಆಚರಿಸಿಕೊಂಡು ಬಂದ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಉಳಿಸುವ ಶಕ್ತಿಯನ್ನು ದೇವರು ನಮಗೆಲ್ಲ ಕರುಣಿಸಲಿ ಎಂದು ಅವರು ತಿಳಿಸಿದರು. ಪತ್ರಕರ್ತ ಶ್ರೀಕಾಂತ್ ಶೆಟ್ಟಿ ಕಾರ್ಕಳ ಉಪನ್ಯಾಸ ನೀಡಿದರು.
ಪ್ರಗತಿಪರ ಕೃಷಿಕ ಕೇಶವ ಭಂಡಾರಿ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಯರಾದ ಭವಿಷ್ಯ ಶೆಟ್ಟಿ ಮತ್ತು ಪೃಥ್ವಿ ರೈ ಅವರನ್ನು ಸನ್ಮಾನಿಸ ಲಾಯಿತು.
ವೇದಿಕೆಯಲ್ಲಿ ಡಾ. ಅಮಿತಾ ಹೆಗ್ಡೆ, ಸಂಘದ ಪದಾಧಿಕಾರಿಗಳಾದ ವಸಂತ ಶೆಟ್ಟಿ, ಕೆಂಚನೂರು ಸೋಮಶೇಖರ ಶೆಟ್ಟಿ, ಉಮೇಶ್ ರೈ ಮೇಗಿನ ಮನೆ, ಡಾ. ಆಶಾಜ್ಯೋತಿ ರೈ, ನಿಟ್ಟೆಗುತ್ತು ರವಿರಾಜ ಶೆಟ್ಟಿ ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಜಯರಾಮ ಸಾಂತ ಸ್ವಾಗತಿಸಿದರು.
ಮಂಗಳೂರು ತಾಲೂಕು ವ್ಯಾಪ್ತಿಯ 13 ಬಂಟರ ಸಂಘಗಳ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Comments are closed.