ಕರಾವಳಿ

ಶ್ರೀಲಂಕಾ ಬಾಂಬ್ ಸ್ಫೋಟದಲ್ಲಿ ಮಡಿದವರಿಗೆ ಮಂಗಳೂರಿನಲ್ಲಿ ಶೃದ್ಧಾಂಜಲಿ

Pinterest LinkedIn Tumblr

ಮಂಗಳೂರು, ಎಪ್ರಿಲ್.24: ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟದಲ್ಲಿ ಮಡಿದವರಿಗೆ ನಗರದ ಮಿಲಾಗ್ರಿಸ್ ಮೈದಾನದಲ್ಲಿ ಮಂಗಳವಾರ ಸಂಜೆ ಶೃದ್ಧಾಂಜಲಿ ಆರ್ಪಿಸಲಾಯಿತು. ಪ್ರಾರ್ಥನೆ ಸಲ್ಲಿಸಲಾಯಿತು.

ರವಿವಾರ ಶ್ರೀಲಂಕಾದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮಡಿದವರಿಗೆ ಶೃದ್ಧಾಂಜಲಿ ಅರ್ಪಿಸಿ ನಗರದ ಮಿಲಾಗ್ರಿಸ್ ಚರ್ಚ್ ಆವರಣದಲ್ಲಿ ಮಂಗಳವಾರ ಸಂಜೆ ನಡೆದ ಶೃದ್ಧಾಂಜಲಿ ಸಭೆಯಲ್ಲಿ ನೂರಾರು ಮಂದಿ ಮೊಂಬತ್ತಿಯನ್ನು ಹಿಡಿದು ಪ್ರಾರ್ಥನೆ ಸಲ್ಲಿಸಿದರು.

ಧರ್ಮಪ್ರಾಂತದ ವಿಕಾರ್ ಜನರಲ್ ಮೊನ್ಸಿಂಜೊರ್ ಮ್ಯಾಕ್ಷಿಮ್ ನೊರೊನ್ಹಾ ಬಾಂಬ್ ಸ್ಫೋಟದಲ್ಲಿ ಮಡಿದ ಜನರ ಆತ್ಮಗಳಿಗೆ ಶಾಂತಿ ಕೋರಿದರು ಮತ್ತು ಗಾಯಾಳುಗಳಿಗೆ ಸಾಂತ್ವನ ನುಡಿದರು. ಫಾ.ಜೆ.ಬಿ. ಕ್ರಾಸ್ತ ಮಡಿದವರಿಗೆ ಮತ್ತು ಗಾಯಾಳುಗಳಿಗೆ ಪ್ರಾರ್ಥನೆ ಸಲ್ಲಿಸಿದರು.

ಮಿಲಾಗ್ರಿಸ್ ದೇವಾಲಯದ ಧರ್ಮಗುರು ಫಾ. ವಲೇರಿಯನ್ ಡಿಸೋಜ ಮತ್ತಿತರ ಧರ್ಮಗುರುಗಳು, ಧರ್ಮಭಗಿನಿಯರು ಮತ್ತು ಭಕ್ತಾಧಿಗಳು ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡರು. ಧರ್ಮಪ್ರಾಂತದ ಪಾಲನಾ ಮಂಡಳಿಯ ಕಾರ್ಯದರ್ಶಿ ಹಾಗೂ ನ್ಯಾಯವಾದಿ ಎಂ.ಪಿ. ನೊರೊನ್ಹಾ ವಂದಿಸಿದರು.

Comments are closed.