ಮಂಗಳೂರು: ಮಂಗಳೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿರುವ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರಿಂದ ಸುಮಾರು 35.32 ಲಕ್ಷ ರೂ. ಮೌಲ್ಯದ 1.10 ಕೆ.ಜಿ. ಚಿನ್ನವನ್ನು ವಶ ಪಡಿಸಿಕೊಂಡಿದ್ದಾರೆ.
ಏರ್ ಇಂಡಿಯಾ ಏಕ್ಸ್‌ಪ್ರೆಸ್ ವಿಮಾನದಲ್ಲಿ ದೋಹಾದಿಂದ ಬರುತ್ತಿದ್ದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನ ಬಳಿ ಸುಮಾರು 14.81ಲಕ್ಷ ರೂ. ಮೌಲ್ಯದ 462.97 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಇನ್ನೋರ್ವ ಪ್ರಯಾಣಿಕನ ಬಳಿ 20.51 ಲಕ್ಷ ರೂ. ಮೌಲ್ಯದ 641 ಗ್ರಾಂ ಅಕ್ರಮ ಚಿನ್ನ ಪತ್ತೆಯಾಗಿದೆ. ಆರೋಪಿಗಳು ಚಿನ್ನವನ್ನು ಪೇಸ್ಟ್ ರೂಪದಲ್ಲಿ ಗುದನಾಳದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.