ಕರಾವಳಿ

ಮಂಗಳೂರಿನಲ್ಲಿ ಅನೀರಿಕ್ಷಿತ ಮಳೆ : ಪರದಾಡಿದ ದ್ವಿಚಕ್ರ ವಾಹನ ಸವಾರರು

Pinterest LinkedIn Tumblr

ಮಂಗಳೂರು, ಮೇ 08: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ಮಳೆ ಸುರಿದಿದ್ದು, ಅನೀರಿಕ್ಷಿತವಾಗಿ ಸುರಿದ ಮಳೆಯಿಂದಾಗಿ ಸಾರ್ವಜನಿಕರು ಕೆಲಹೊತ್ತು ಪರದಾಡಿದರು.

ಜಿಲ್ಲೆಯಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿದ್ದು, ನಗರದ ಕೆಲವು ಪ್ರದೇಶಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಒಂದು ತಾಸಿಗೂ ಹೆಚ್ಚು ಕಾಲ ಮಳೆಯಾಗಿದೆ.

ಮಂಗಳೂರು ನಗರ ಮತ್ತು ಹೊರ ವಲಯದಲ್ಲಿ ನಿನ್ನೆ ಮಧ್ಯಾಹ್ನ ಹಾಗೂ ಸಂಜೆ ಹೊತ್ತಿಗೆ ಮಳೆ ಸುರಿದಿದ್ದು, ಯಾವೂದೇ ಪೂರ್ವ ತಯಾರಿ ಇಲ್ಲದೇ ತೆರಳಿದಂತಹ ದ್ವಿಚಕ್ರ ವಾಹನ ಸವಾರರು ಸಂಕಷ್ಟಕೀಡಾದರು.

ನಗರದ ಹೊರವಲಯದ ಕಿನ್ನಿಗೋಳಿ, ಕೋಟೆಕಾರ್ ಬೀರಿ ಮುಂತಾದ ಸ್ಥಳಗಳಲ್ಲಿ ಮಂಗಳವಾರ ಬೆಳಿಗ್ಗೆಯೇ ಸ್ವಲ್ಪ ಪ್ರಮಾಣದ ಮಳೆಯಾಗಿದೆ. ನಗರದ ಯೆಯ್ಯಾಡಿ, ದೇರಬೈಲ್, ಕೊಂಚಾಡಿ, ಬೋಂದೇಲ್ ಮುಂತಾದ ಕೆಲವು ಸ್ಥಳಗಳಲ್ಲಿ ಅರ್ಧ ತಾಸು ಮಳೆಯಾಗಿದೆ. ಉಳಿದಂತೆ ಮಂಗಳೂರಿನ ಹೊರವಲಯ ಹಾಗೂ ಪುತ್ತೂರು ಸೇರಿದಂತೆ ಜಿಲ್ಲೆಯ ವಿವಿದೆಡೆಗಳಲ್ಲಿ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಕೆಲವು ದಿನಗಳಿಂದ ಬಿಸಿಲ ಧಗೆಯಿಂದ ಕಂಗೆಟ್ಟಿದ್ದ ಜನತೆಗೆ ಅನಿರೀಕ್ಷಿತವಾಗಿ ಸುರಿದ ಮಳೆಯು ತಂಪು ನೀಡಿದೆ. ಕರಾವಳಿ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ.

Comments are closed.