ಕರಾವಳಿ

ಮಂಗಳೂರು : ಪೊಲೀಸರಿಗೆ ಹಲ್ಲೆ ನಡೆಸಿದ ರೌಡಿ ಶೀಟರ್ ಮೇಲೆ ಪೊಲೀಸ್ ಫೈರಿಂಗ್

Pinterest LinkedIn Tumblr

ರೌಡಿ ಶೀಟರ್ ಗೌರೀಶ್

ಮಂಗಳೂರು, ಮೇ 10: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್ ಮೇಲೆ ಮಂಗಳೂರು ನಗರ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.

ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿ ಶೀಟರ್ ತನ್ನನ್ನು ಬಂಧಿಸಲು ಬಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಪ್ರಾಣರಕ್ಷಣೆಗಾಗಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ರೌಡಿ ಶೀಟರ್ ಗೌರೀಶ್ ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ತಂಡದಲ್ಲಿನ ಪೇದೆಯೊಬ್ಬರಿಗೆ ಆರೋಪಿ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಜಾಗೃತರಾದ ಪೊಲೀಸರು ತಮ್ಮ ಪ್ರಾಣರಕ್ಷಣೆಗಾಗಿ ರೌಡಿಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ರೌಡಿ ಶೀಟರ್ ಗೌರೀಶ್‍ನ ಕಾಲಿಗೆ ಗುಂಡೇಟು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಗೌರೀಶ್ ನಿಂದ ಹಲ್ಲೆಗೊಳಗಾದ ಹೆಡ್ ಕಾನ್ ಸ್ಟೇಬಲ್ ಶೀನಪ್ಪ ಆಆರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೊಳಪಡಿಸಲಾಗಿದೆ.

ಹೆಡ್ ಕಾನ್ ಸ್ಟೇಬಲ್ ಶೀನಪ್ಪ

ರೌಡಿಶೀಟರ್ ಗೌರೀಶ್ ವಿರುದ್ಧ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮೂರು ಕೊಲೆ ಆರೋಪ ಪ್ರಕರಣಗಳಿವೆ. ಮಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿಯೂ ದೂರು ದಾಖಲಾಗಿತ್ತು. ಆರೋಪಿಯು ಜನರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದಲ್ಲಿ ಬುಧವಾರ ಮತ್ತೊಂದು ಕೇಸು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ರೌಡಿಶೀಟರ್ ನ್ನು ಬಂಧಿಸಲು ಬಲೆಬೀಸಿದ್ದರು.

Comments are closed.