ಕರಾವಳಿ

ಶ್ರೀಮತಿ ಶೆಟ್ಟಿ ಕೊಲೆ – ನೈಜ ಆರೋಪಿಗಳ ಬಂಧನಕ್ಕೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ : ಶಾಸಕ ಕಾಮತ್

Pinterest LinkedIn Tumblr

ಮಂಗಳೂರು : ಅತ್ಯಂತ ಭೀಭತ್ಸ ರೀತಿಯಲ್ಲಿ ಮಧ್ಯ ವಯಸ್ಸಿನ ಮಹಿಳೆ ಶ್ರೀಮತಿ ಶೆಟ್ಟಿಯವರನ್ನು ಕೊಂದು ನಗರದ ವಿವಿದೆಡೆ ಎಸೆದಿರುವ ಹಂತಕರ ಪೈಶಾಚಿಕ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಿ ಸೂಕ್ತ ತನಿಖೆ ನಡೆಸಬೇಕೆಂದು ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ಬಂದು ಅವರು ನೈಜ ಆರೋಪಿಗಳನ್ನು ಬಂಧಿಸದಿದ್ದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇಲ್ಲ ಎಂದು ಸ್ಪಷ್ಟವಾಗುತ್ತದೆ. ರಾಜ್ಯದ ಗೃಹ ಸಚಿವರು ಈ ವಿಷಯದಲ್ಲಿ ಮೌನವಾಗಿರದೇ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡುವ ಅವಶ್ಯಕತೆ ಇದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಎಲೆಕ್ಟ್ರಿಕಲ್ ಅಂಗಡಿಯಲ್ಲಿ ವ್ಯವಹಾರ ಮಾಡುತ್ತಾ ತಮ್ಮ ಸೋದರತ್ತೆಯೊಂದಿಗೆ ವಾಸಿಸುತ್ತಿದ್ದ ಶ್ರೀಮತಿ ಶೆಟ್ಟಿಯವರು ಸಾಮಾನ್ಯ ಜೀವನ ನಡೆಸುತ್ತಿದ್ದರು. ಅಂತವರನ್ನು ಕೊಂದಿರುವ ರೀತಿಯನ್ನು ಮಾಧ್ಯಮಗಳಲ್ಲಿ ಓದಿದಾಗ ಧಿಗೃಮೆ ಆಯಿತು ಎಂದು ಹೇಳಿದ ಶಾಸಕರು ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನಿನ ಬಲೆಯಿಂದ ತಪ್ಪಿಸಿಕೊಳ್ಳಲೇಬಾರದು ಎಂದು ಪೊಲೀಸ್ ಕಮೀಷನರ್ ಅವರಿಗೆ ಹೇಳಿದ್ದೇನೆ.

ನೈಜ ಆರೋಪಿಗಳನ್ನು ಬಂಧಿಸುವ ಜವಾಬ್ದಾರಿ ಪೊಲೀಸ್ ಅಧಿಕಾರಿಗಳ ಮೇಲಿದ್ದು ಅವರು ಕೂಡ ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ ಎಂದು ಶಾಸಕರು ತಿಳಿಸಿದ್ದಾರೆ.

Comments are closed.