ಮಂಗಳೂರು, ಮೇ.17: ಮಂಗಳೂರು ಪೊಲೀಸರು ಶುಕ್ರವಾರ ಬೆಳಗ್ಗೆ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯೊಂದರಲ್ಲಿ ವ್ಯಕ್ತಿಯೊಬ್ಬರಿಂದ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೊಬ್ಬರಿ ಒಂದು ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.
ಬಂಧಿತ ವ್ಯಕ್ತಿಯನ್ನು ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ಮಂಜುನಾಥ್ (56) ಎಂದು ಗುರುತಿಸಲಾಗಿದೆ. ಈತ ಬ್ಯಾಗ್ ಒಂದರಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಒಂದು ಕೋಟಿ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳ್ಳಿಗ್ಗೆ 6.30 ಕ್ಕೆ ಮಂಗಳೂರಿನ ರಥಬೀದಿಯಲ್ಲಿ ಬಂದರ ಪೋಲಿಸ್ ಠಾಣೆಯ ಸಿಂಬದಿಗಳು ಗಸ್ತು ತಿರುತ್ತಿದ್ದ ಸಂದರ್ಭದಲ್ಲಿ ಅನುಮಾಸ್ಪದವಾಗಿ ಹೆಗಲಮೇಲೆ ಬ್ಯಾಗ ಹಾಕಿಕೊಂಡು ತಿರುಗತ್ತಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ ಆತ ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಆತನ ಬ್ಯಾಗ್ ಪರಿಶೀಲನೆ ಮಾಡಿದಾಗ ಬ್ಯಾಗ್‌ನೊಳಗ್ಗೆ ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು ಒಂದು ಕೋಟಿ ರೂ. ನಗದು ಪತ್ತೆಯಾಗಿದೆ.
ಕೂಡಲೇ ನಗದಿನೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆಗೊಳಪಡಿಸಿದ್ದಾರೆ. ಈತ ಯಾರು? ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಎಲ್ಲಿಂದ.. ಯಾಕೆ ತಂದಿದ್ದಾನೆ.. ಈ ಎಲ್ಲಾ ಮಾಹಿತಿಗಳು ಪೊಲೀಸ್ ತನಿಖೆಯಿಂದ ಇನ್ನಷ್ಟೇ ಹೊರ ಬೀಳಬೇಕಿದೆ.