ಉಡುಪಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ತನ್ನ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರಿಗಿಂತ ದೊಡ್ಡ ಮಟ್ಟದ ಮುನ್ನಡೆ ಸಾಧಿಸಿದ್ದಾರೆ. ಶೋಭಾ ಕೆರಂದ್ಲಾಜೆ ಮೊದಲ ಸುತ್ತು 18000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಅಂತೆಯೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತನ್ನ ಪ್ರತಿಸ್ಪರ್ಧಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗಿಂತ ಮುನ್ನಡೆಯಲ್ಲಿದ್ದಾರೆ. ಮೊದಲ ಸುತ್ತಿನಲ್ಲಿ ಬಿಜೆಪಿಯ ಬಿ.ವೈ. ರಾಘವೇಂದ್ರ ಅವರಿಗೆ 7988 ಮತಗಳ ಮುನ್ನಡೆ ಬಿಜೆಪಿ ಅಭ್ಯರ್ಥಿ ರಾಘವೆಂದ್ರ ಪಡೆದ ಮತಗಳು 32243. ಮೈತ್ರಿಕೂಟದ ಅಭ್ಯರ್ಥಿ ಮಧುಬಂಗಾರಪ್ಪ ಪಡೆದ ಮತಗಳು 24594.
Comments are closed.