ಮಂಗಳೂರು, ಮೇ.23: ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು ಭಾರೀ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಮೂರನೇ ಭಾರಿಗೆ ಸಂಸದರಾಗಿ ಅಯ್ಕೆಯಾಗಿ ಹ್ಯಾಟ್ರಿಕ್ ಜಯಭೇರಿ ಬಾರಿಸಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.
ತಮ್ಮ ಪ್ರತಿಸ್ಫರ್ಧಿ ಕಾಂಗ್ರೆಸ್ -ಜೆಡಿಎಸ್‌ನ ಮೈತ್ರಿ ಅಭ್ಯರ್ಥಿ ಮಿಥುನ್ ರೈಯವರು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲುವ ಮೂಲಕ ರೈ ಅವರಿಗೆ ಮುಖಭಂಗವಾಗಿದೆ.
ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಅತ್ಯಧಿಕ ಮತಗಳಿಂದ ಚುನಾಯಿತರಾಗುವ ಮೂಲಕ ಪ್ರತಿಷ್ಠಿತ ಕರಾವಳಿ ಕ್ಷೇತ್ರದಿಂದ ಬಿಜೆಪಿ ನಿರಂತರ ಎಂಟನೇ ಬಾರಿಗೆ ಗೆಲುವು ಸಾಧಿಸಿ ತನ್ನ ಪ್ರಾಬಲ್ಯ ಮುಂದುವರಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ಈ ಬಾರಿ ಕೂಡ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿ ಇತಿಹಾಸ ಬರೆದಿದ್ದಾರೆ.