ಕರಾವಳಿ

ಗೆಲುವಿಗೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಹ್ಯಾಟ್ರಿಕ್ ಹೀರೋ ಸಂಸದ ನಳಿನ್ ಕುಮಾರ್ ಕಟೀಲ್

Pinterest LinkedIn Tumblr

ಮಾಧ್ಯಮ ಸ್ನೇಹಿತರಿಗೂ ಹೃತ್ಪೂರ್ವಕ ಕೃತಜ್ಞತೆಗಳು : ನಳಿನ್ ಕುಮಾರ್ ಕಟೀಲ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಗೌರವಾನ್ವಿತ ಎಲ್ಲಾ ನಾಗರಿಕರಿಗೆ, ಸರ್ವ ಮತದಾರ ಬಾಂಧವರಿಗೆ, ಶ್ರದ್ಧೆಯ ತಾಯಂದಿರಿಗೆ, ಹಗಲಿರುಳು ಶ್ರಮಿಸಿದ ಬಿಜೆಪಿ ಪಕ್ಷದ ನಿಸ್ವಾರ್ಥ ಕಾರ್ಯಕರ್ತರಿಗೆ, ಪಕ್ಷದ ಹಿರಿಯರಿಗೆ, ಪಕ್ಷದ ಎಲ್ಲಾ ಮುಖಂಡರಿಗೆ, ನಮ್ಮ ಹಿತೈಷಿಗಳಿಗೆ, ನೇರ ಪರೋಕ್ಷವಾಗಿ ಬೆಂಬಲಿಸಿದ ಎಲ್ಲಾ ಬಂಧು, ಮಿತ್ರರಿಗೆ, ಮಾಧ್ಯಮ ಸ್ನೇಹಿತರಿಗೆ, ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಹೃದಯಾಂತರಾಳದ ಕೃತಜ್ಞತೆಗಳನ್ನು ಸಮರ್ಪಿಸುವುದಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಎಲ್ಲರು ಜತೆಯಾಗಿ ಆಶೀರ್ವಾದ ಮಾಡಿ ನನ್ನನ್ನು ಮತ್ತೊಮ್ಮೆ ಸಂಸದನಾಗಿ ಆಯ್ಕೆ ಮಾಡಿದ್ದೀರಿ. ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ನಿಮ್ಮಲ್ಲರ ಅಪೇಕ್ಷೆಯನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಆಶೀರ್ವಾದ ಸದಾ ನನ್ನ ಮೇಲಿರಲಿ. ಮತ್ತೊಮ್ಮೆ ನಿಮಗೆಲ್ಲರಿಗೂ ಕೈಮುಗಿದು ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments are closed.