
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 13 ಅಭ್ಯರ್ಥಿಗಳು ಲೋಕಸಭಾ ಚುನವಾಣೆಗೆ ಸ್ಪರ್ಧಿಸಿದ್ದು, ಇವರಲ್ಲಿ ಪ್ರಮುಖ ಎರಡು ಪಕ್ಷಗಳಾದ ಭಾರತೀಯ ಜನತಾ ಪಾರ್ಟಿ ಹಾಗೂ ಕಾಂಗ್ರೆಸ್ ಹೊರತು ಪಡಿಸಿ ಉಳಿದ ಎಲ್ಲಾ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.
ಈಗಾಗಲೇ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು ಈ ಬಾರಿ 2,73,367 ದಾಖಲೆ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮಾತ್ರವಲ್ಲದೇ ಮೂರನೇ ಭಾರಿಗೆ ಸಂಸದರಾಗಿ ಅಯ್ಕೆಯಾಗುವ ಮೂಲಕ ನಳಿನ್ ಕುಮಾರ್ ಕಟೀಲ್ ಅವರು ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

ತಮ್ಮ ಪ್ರತಿಸ್ಫರ್ಧಿ ಕಾಂಗ್ರೆಸ್ -ಜೆಡಿಎಸ್ನ ಮೈತ್ರಿ ಅಭ್ಯರ್ಥಿ ಮಿಥುನ್ ರೈಯವರು 4,99,387 ಮತಗಳನ್ನು ಪಡೆಯುವ ಮೂಲಕ 2,73,367 ದಾಖಲೆ ಮತಗಳ ಅಂತರದಿಂದ ಸೋತಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂರನೇ ಬಾರಿಗೆ ಅತ್ಯಧಿಕ ಮತಗಳಿಂದ ಚುನಾಯಿತರಾಗುವ ಮೂಲಕ ಪ್ರತಿಷ್ಠಿತ ಕರಾವಳಿ ಕ್ಷೇತ್ರದಿಂದ ಬಿಜೆಪಿ ನಿರಂತರ ಎಂಟನೇ ಬಾರಿಗೆ ಗೆಲುವು ಸಾಧಿಸಿ ತನ್ನ ಪ್ರಾಬಲ್ಯ ಮುಂದುವರಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರು ಈ ಬಾರಿ ಕೂಡ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿ ಇತಿಹಾಸ ಬರೆದಿದ್ದಾರೆ.
ಉಳಿದಂತೆ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಫರ್ಧಿಸಿ ಠೇವಣಿ ಕಳೆದುಕೊಂಡಿರುವವರ ವಿವರ ಇಲ್ಲಿ ನೀಡಲಾಗಿದೆ. ಯಾರಿಗೆ ಎಷ್ಟು ಮತ – ಇಲ್ಲಿದೆ ವಿವರ.

Comments are closed.