ಕರಾವಳಿ

ಹ್ಯಾಟ್ರಿಕ್ ಗೆಲುವಿನ ಸರದಾರ ನಳಿನ್ ಕುಮಾರ್‌ ಒಂದೇ ದಿನದಲ್ಲಿ ಭೇಟಿ ನೀಡಿದ ಕ್ಷೇತ್ರವೆಷ್ಟು?

Pinterest LinkedIn Tumblr

ಮಂಗಳೂರು : ಲೋಕಸಭಾ ಚುನಾವಣೆಯಲ್ಲಿ ಭರ್ಜರಿಯಾಗಿ ಜಯಗಳಿಸಿದ ಮರುದಿನವೇ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಹ್ಯಾಟ್ರಿಕ್ ಗೆಲುವಿನ ಸರದಾರ ನಳಿನ್ ಕುಮಾರ್‌ ಕಟೀಲ್ ಅವರು ಜಿಲ್ಲೆಯ ಹಲವಾರು ಪುಣ್ಯಕ್ಷೇತ್ರಗಳ ದರ್ಶನ ಮಾಡಿದ್ದಾರೆ. ಮುಂಜಾನೆಯಿಂದಲೇ ಕ್ಷೇತ್ರದರ್ಶನ ಆರಂಭಿಸಿದ ಅವರು ರಾತ್ರಿಯವರೆಗೂ ಹಲವಾರು ದೇವಸ್ಥಾನಗಳಿಗೆ ತೆರಳಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ಸಲ್ಲಿಸಿದರು.

ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಇವರು ಕ್ರವಾರ ಮುಂಜಾನೆ ಮೊದಲಿಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವರ ಸನ್ನಿಧಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡರು. ಬಳಿಕ ಮಂಗಳಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳಕ್ಕೆ ತೆರಳಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಪುತ್ತೂರು ಶಾಸಕರೂ ಆದ ಶ್ರೀ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಜಯಂತ್ ಕೋಟ್ಯಾನ್ ಹಾಗೂ ಇನ್ನಿತರರು ಜೊತೆಗಿದ್ದರು.

ಕೊಕ್ಕಡ ವೈದ್ಯನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರೂ ಹಾಗೂ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ಹಾಗೂ ಇನ್ನಿತರರು ಜೊತೆಗಿದ್ದರು.

ಕೊಕ್ಕಡದಿಂದ ಧರ್ಮಸ್ಥಳವರೆಗೆ ನಡೆದ ಭಾರತೀಯ ಜನತಾ ಪಾರ್ಟಿಯ ವಿಜಯೋತ್ಸವ ಮೆರವಣಿಗೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಮೂರನೇ ಬಾರಿ ಪ್ರಚಂಡ ಬಹುಮತದಿಂದ ದಿಗ್ವಿಜಯ ಸಾಧಿಸಿದ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್* ಇವರಿಗೆ ಅಭಿನಂದನಾ ಕಾರ್ಯಕ್ರಮ. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಶ್ರೀ ಹರೀಶ್ ಪೂಂಜಾ ಹಾಗೂ ಇತರ ನಾಯಕರು ಜೊತೆಗಿದ್ದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪ್ರಚಂಡ ಬಹುಮತದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಭಾರತೀಯ ಜನತಾ ಪಕ್ಷದ ಹೆಮ್ಮೆಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇವರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರೂ ಹಾಗೂ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜಾ ಹಾಗೂ ಇನ್ನಿತರರು ಜೊತೆಗಿದ್ದರು.

ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು ಬಂಟ್ವಾಳ ಶಾಸಕ ಶ್ರೀ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ಇವರ ಜೊತೆ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇದೇ ರೀತಿ ಶುಕ್ರವಾರ ಮುಂಜಾನೆಯಿಂದ ರಾತ್ರಿಯವರೆಗೂ ಜಿಲ್ಲೆಯ ಇನ್ನೂ ಹಲವಾರು ಕ್ಷೇತ್ರಗಳಿಗೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ದೇವರ ದರ್ಶನ ಪಡೆದರು.

Comments are closed.