ಕರಾವಳಿ

ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ನಡೆದ ಯಕ್ಷಗಾನ ಕಲಾವಿದರ ಕ್ರೀಡಾಕೂಟ : ಇದು ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಆಟ

Pinterest LinkedIn Tumblr

ಮಂಗಳೂರು, ಮೇ 29: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಯಕ್ಷಧ್ರುವ ಕ್ರೀಡಾಕೂಟನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯಕ್ಷಗಾನ ಕಲಾವಿದರಿಗೆ ಸರ್ಕಾರದಿಂದ ಮಾಸಾಶನ ನೀಡುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಯಕ್ಷಗಾನ ಕಲಾವಿದರು ವರ್ಷದಲ್ಲಿ ಆರು ತಿಂಗಳು ವೃತ್ತಿ ಮಾಡಿ, ಇನ್ನಾರು ತಿಂಗಳ ಕಾಲ ಕೆಲಸವಿಲ್ಲದೆ ಸಂಕಷ್ಟಪಡುತ್ತಾರೆ. ರಾತ್ರಿ ನಿದ್ದೆ ಬಿಟ್ಟು ಮೇಳಗಳಲ್ಲಿ ದುಡಿಯುವುದರಿಂದ ಆರೋಗ್ಯದ ಸಮಸ್ಯೆಯೂ ಕಲಾವಿದರನ್ನು ಕಾಡುತ್ತದೆ. ಜತೆಗೆ ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆಯ ಜವಾಬ್ದಾರಿಯೂ ಇರುತ್ತದೆ. ಹಾಗಾಗಿ ಯಕ್ಷಗಾನ ಕಲಾವಿದರಿಗೆ ಮಾಸಾಶನ ನೀಡುವ ಕುರಿತು ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಖಾದರ್ ಹೇಳಿದರು.

ಮಂಗಳೂರು ದಕ್ಷೀಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಸುರೇಶ್ ಭಂಡಾರಿ ಕಡಂದಲೆ, ಡಾ.ವಿರಾರ್ ಶಂಕರ್ ಬಿ.ಶೆಟ್ಟಿ, ಮನೋಹರ್ ಶೆಟ್ಟಿ, ಲೀಲಾ ಶಂಕರ್ ಶೆಟ್ಟಿ, ಸಂತೋಷ್ ಕುಮಾರ್ ಬೋಳಿಯಾರ್, ಸವಣೂರು ಸೀತಾರಾಮ ಶೆಟ್ಟಿ, ಸದಾನಂದ ಶೆಟ್ಟಿ, ಅನೀಶ್ ಶೆಟ್ಟಿ ಪಟ್ಲ ಗುತ್ತು,ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ರವಿಶಂಕರ್ ಶೆಟ್ಟಿ ಬಡಾಜೆ, ಯಶ್ ಪಾಲ್ ಸುವರ್ಣ, ಪ್ರದೀಪ್ ಡಿ’ಸೋಜಾ , ಪಳ್ಳಿ ಕಿಶನ್ ಹೆಗ್ಡೆ ಉದ್ಯಮಿ ಸಚ್ಚಿದಾನಂದ ಶೆಟ್ಟಿ, ಉದಯ ಪೂಜಾರಿ,ಯಾದವ ಕೊಟ್ಯಾನ್ ಮತ್ತಿತರರು ಉಪಸ್ಥತರಿದ್ದರು.

ಕಾರ್ಯಕ್ರಮದ ರೂವಾರಿ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಮುಖ್ಯಸ್ಥ ಪಟ್ಲ ಸತೀಶ್ ಶೆಟ್ಟಿ ಪ್ರಸ್ತಾವನೆಗೈದರು. ಗಿರೀಶ್ ಎಂ.ಶೆಟ್ಟಿ ಸ್ವಾಗತಿಸಿ, ಕೃಷ್ಣ ಶೆಟ್ಟಿ ತಾರೆಮಾರ್ ವಂದಿಸಿದರು. ನಿತೇಶ್ ಶೆಟ್ಟಿ ನಿರೂಪಿಸಿದರು.

ಯಕ್ಷಗಾನ ಕಲಾವಿದರ ಮೊದಲ ಕ್ರೀಡಾಕೂಟ :

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಮೇಳಗಳ ಯಕ್ಷಗಾನ ಕಲಾವಿದರಿಗೆ ಇದೇ ಮೊದಲ ಬಾರಿಗೆ ಕ್ರೀಡಾಕೂಟ ಆಯೋಜನೆಗೊಂಡಿದೆ. ಮಂದಾರ್ತಿ ಮೇಳ ಸಾಲಿಗ್ರಾಮ, ಕಟೀಲಿನ 6 ಮೇಳ, ಬಪ್ಪನಾಡು, ಸಸಿಹಿತ್ಲು, ಎಡನೀರು, ಕೂಡ್ಲು, ಮಲ್ಲ, ಕುತ್ಯಾಳ, ಬೆಂಕಿನಾಥೇಶ್ವರ ಮೇಳ, ಸುಂಕದಕಟ್ಟೆ ಮೇಳ, ಸೌಕೂರು, ಅಮೃತೇಶ್ವರಿ ಕೋಟ, ಮಾರಣಕಟ್ಟೆ ಮೇಳ, ಗೋಳಿಗರಡಿ, ಹಿರಿಯಡ್ಕ, ಮಡಾಮಕ್ಕಿ, ಧರ್ಮಸ್ಥಳ ಸಹಿತ 24 ಮೇಳಗಳ 400ಕ್ಕೂ ಅಧಿಕ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Comments are closed.