ಕರಾವಳಿ

ನಾಳೆ ಮಂಗಳೂರಿನಲ್ಲಿ ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು : ನಗರದ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿ ಸಂಸ್ಥೆಯು ಸಿಇಟಿ ಮತ್ತು ನೀಟ್ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವನ್ನು ಹಮ್ಮಿಕೊಂಡಿದೆ. ನಾಳೆ (ಮೇ 31) ಬೆಳಿಗ್ಗೆ ಗಂ. 9.30ಕ್ಕೆ ನಗರದ ವಲೆನ್ಸಿಯಾ-ನಂದಿಗುಡ್ಡೆ ರಸ್ತೆಯಲ್ಲಿರುವ ‘ಬ್ಯಾರೀಸ್ ವಲೆನ್ಸಿಯಾ’ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ.

ಶಿಬಿರದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯುನಾನಿ, ಹೋಮಿಯೋಪಥಿ, ಯೋಗ – ನ್ಯಾಚುರಾಪಥಿ, ಬಿ. ಫಾರ್ಮ, ಫಾರ್ಮ ಡಿ., ಇಂಜಿನೀಯರಿಂಗ್ ಮತ್ತು ಫಾರ್ಮ್ ಸಾಯನ್ಸ್‍ನ ವಿವಿಧ ಕೋರ್ಸುಗಳಿಗೆ ನಡೆಯಲಿರುವ ಆನ್‍ಲೈನ್ ಸಿಇಟಿ/ನೀಟ್ ಕೌನ್ಸಿಲಿಂಗ್‍ನ ವಿಧಾನ, ದಾಖಲಾತಿ ಪರಿಶೀಲನೆ, ಬೇಕಾಗಿರುವ ಅಗತ್ಯ ದಾಖಲೆಗಳು, ಸೀಟುಗಳ ಆಯ್ಕೆ ಪ್ರಕಿೃಯೆ ಮತ್ತು ಪಿಯುಸಿ ಬಳಿಕ ಕಲಿಕೆಗಿರುವ ಅವಕಾಶಗಳ ಕುರಿತಂತೆ ಮಾಹಿತಿ ನೀಡಲಾಗುವುದು.

ಪ್ರವೇಶ ಉಚಿತವಾಗಿದ್ದು, ಕರಿಯರ್ ಗೈಡೆನ್ಸ್ ಎಂಡ್ ಇನ್ಫೊರ್ಮೇಶನ್ ಸೆಂಟರ್‍ನ ಸ್ಥಾಪಕಾಧ್ಯಕ್ಷ ಉಮರ್ ಯು. ಹೆಚ್. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಆಸಕ್ತರು ದೂ. ಸಂ. 0824-4261320, 9845054191 ಗೆ ಕರೆಮಾಡಿ ಹೆಸರು ನೋಂದಾಯಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Comments are closed.