(ಕಡತ ಚಿತ್ರ)
ಮಂಗಳೂರು / ಊದುಪಿ: ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು, ಉಡುಪಿ ಬನ್ನಂಜೆಯ ಬಿಲ್ಲವರ ಸೇವಾ ಸಂಘ ಮತ್ತು ಪರ್ಕಳದ ನೇತಾಜಿ ಸ್ಪೋಟ್ಸ್‍ನ ಸಹಯೋಗದೊಂದಿಗೆ ಸಿಇಟಿ ಮತ್ತು ನೀಟ್ ಪ್ರವೇಶ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವನ್ನು ಹಮ್ಮಿಕೊಂಡಿದೆ. ಜೂನ್ 7ರ ಅಪರಾಹ್ನ ಗಂ. 2.30ಕ್ಕೆ ಉಡುಪಿ ಬನ್ನಂಜೆಯ ಬಿಲ್ಲವರ ಸೇವಾ ಸಂಘದ ಶಿವಗಿರಿ ಸಭಾಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಶಿಬಿರದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯುನಾನಿ, ಹೋಮಿಯೋಪಥಿ, ಯೋಗ – ನ್ಯಾಚುರಾಪಥಿ, ಬಿ. ಫಾರ್ಮ, ಫಾರ್ಮ ಡಿ., ಇಂಜಿನೀಯರಿಂಗ್ ಮತ್ತು ಫಾರ್ಮ್ ಸಾಯನ್ಸ್‍ನ ವಿವಿಧ ಕೋರ್ಸುಗಳಿಗೆ ನಡೆಯಲಿರುವ ಆನ್‍ಲೈನ್ ಸಿಇಟಿ/ನೀಟ್ ಕೌನ್ಸಿಲಿಂಗ್‍ನ ವಿಧಾನ, ದಾಖಲಾತಿ ಪರಿಶೀಲನೆ, ಬೇಕಾಗಿರುವ ಅಗತ್ಯ ದಾಖಲೆಗಳು, ಸೀಟುಗಳ ಆಯ್ಕೆ ಪ್ರಕಿೃಯೆ ಮತ್ತು ಪಿಯುಸಿ ಬಳಿಕ ಕಲಿಕೆಗಿರುವ ಅವಕಾಶಗಳ ಕುರಿತಂತೆ ಮಾಹಿತಿ ನೀಡಲಾಗುವುದು.
ಪ್ರವೇಶ ಉಚಿತವಾಗಿದ್ದು, ಕರಿಯರ್ ಗೈಡೆನ್ಸ್ ಎಂಡ್ ಇನ್ಫೊರ್ಮೇಶನ್ ಸೆಂಟರ್‍ನ ಸ್ಥಾಪಕಾಧ್ಯಕ್ಷ ಉಮರ್ ಯು. ಹೆಚ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಳಿಗಾಗಿ ಮೊ. ಸಂ. 9448952964 ಅಥವಾ 9448252703ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.