ಕರಾವಳಿ

ತೊಕ್ಕೊಟ್ಟು ಮೇಲ್ಸೇತುವೆ ನಾಳೆ ಉದ್ಘಾಟನೆ : ಸಂಸದರ ಶಿಫಾರಸ್ಸಿನಿಂದ 3 ತಿಂಗಳಲ್ಲಿ 24 ಗಂಟೆಗಳ ಕಾಲ ನಿರಂತರ ಕಾಮಗಾರಿ

Pinterest LinkedIn Tumblr

ಪೂರ್ಣಗೊಂಡ ತೊಕ್ಕೊಟ್ಟು ಮೇಲ್ಸೇತುವೆಯ ವಿಹಂಗಮ ನೋಟ

ಮಂಗಳೂರು, ಜೂನ್, 12 : ಮಂಗಳೂರು ಹೊರವಲಯದ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಜಂಕ್ಷನ್‌ ನಲ್ಲಿ ನಿರ್ಮಿಸಲಾಗಿರುವ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ನಾಳೆ ಈ ಮೇಲ್ಸೇತುವೆಯ ಉದ್ಘಾಟನೆ ನೆರವೇರಲಿದೆ.

ದ.ಕ.ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಬೆಳಗ್ಗೆ 9 ಗಂಟೆಗೆ ಈ ಮೇಲ್ಸೇತುವೆಯನ್ನು ಉದ್ಘಾಟಿಸಲಿ ರುವರು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಜಿಲಾಧಿಕಾರಿಗಳು, ಜನಪ್ರತಿನಿಧಿಗಳು, ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಸಂಬಂಧ ಪಟ್ಟ ಇತರ ಇಲಾಖಾ ಅಧಿಕಾರಿಗಳು ಹಾಗೂ ಸ್ಥಳೀಯ ರಾಜಕೀಯ ಪಕ್ಷಗಳ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವರು.

ಪೂರ್ಣಗೊಂಡ ತೊಕ್ಕೊಟ್ಟು ಮೇಲ್ಸೇತುವೆಯ ವಿಹಂಗಮ ನೋಟ

ಹಿಂದಿನ ವೇಳಾಪಟ್ಟಿ ಪ್ರಕಾರ ತೊಕ್ಕೊಟ್ಟು ಮೇಲ್ಸೇತುವೆಯು ಈ ಹಿಂದೆಯೇ ಉದ್ಘಾಟನೆಯಾಗಬೇಕಿತ್ತು. ಆದರೆ ತಾಂತ್ರಿಕ ಕಾರಣ ಗಳಿಂದ ಉದ್ಘಾಟನಾ ದಿನಾಂಕವನ್ನು ಮುಂದೂಡಲಾಗಿತ್ತು. ಜೂನ್ 14ರಂದು ಜನಪ್ರತಿನಿಧಿಗಳು, ಜಿಲ್ಲಾಡಳಿತ ಮತ್ತು ಹೆದ್ದಾರಿ ಇಲಾಖೆಯ ಅಧಿಕಾರಿಗಳ ಸಭೆ ನಡೆಯಲಿದ್ದು ಸಭೆಯ ಬಳಿಕ ಉದ್ಘಾಟನೆಯ ದಿನಾಂಕ ನಿಗದಿ ಪಡಿಸುವುದಾಗಿ ಹೇಳಲಾಗಿತ್ತು. ಆದರೆ ಇದೀಗ ಒಂದೆಡೆ ಮಳೆ ಆರಂಭವಾಗಿದೆ. ಮಾತ್ರವಲ್ಲದೇ ಮೇಲ್ಸೇತುವೆ ಕಾಮಗಾರಿ ಸಂಪೂರ್ಣವಾಗಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಾಳೆಯೇ ಮೇಲ್ಸೇತುವೆಯ ಉದ್ಘಾಟನೆ ನೆರವೇರಲಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರಿಂದ ( ಪ್ರತ್ಯೇಕ ದಿನಗಳಲ್ಲಿ)  ತೊಕ್ಕೊಟ್ಟು ಮೇಲ್ಸೇತುವೆಯ ಪರಿಶೀಲನೆ.

ಎಂಟು ವರ್ಷಗಳ ಹಿಂದೆ ಆರಂಭಗೊಂಡಿದ್ದ ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಆರ್ಥಿಕ ಅಡಚಣೆಯಿಂದ ಅಮೆಗತಿಯಲ್ಲಿ ಸಾಗಿತ್ತು. ತೊಕ್ಕೊಟ್ಟು ಮೇಲ್ಸೇತುವೆ ಹಾಗು ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವಿಳಂಬ ವಿಚಾರ ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಕಾಮಗಾರಿಯ ವಿಳಂಬಕ್ಕೆ ಕಾರಣ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಎಂದು ಆರೋಪಿಸಲಾಗಿತ್ತು. ಈ ವಿಚಾರವನ್ನೆ ಹಿಡಿದು ಕಾಂಗ್ರೆಸ್ ಹಾಗು ಜೆಡಿಎಸ್ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದವು. ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ನಡೆಸುವ ಸಂಸ್ಥೆಗೆ ಸಂಸದರ ಶಿಫಾರಸ್ಸಿನ ಮೇರೆಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಿದ್ದರು. ಈಗ ಕಾಮಗಾರಿ ಪೂರ್ಣಗೊಂಡಿದೆ.

ಸಂಸದರ ಶಿಫಾರಸ್ಸಿನಿಂದ 3 ತಿಂಗಳಲ್ಲಿ 24 ಗಂಟೆಗಳ ಕಾಲ ನಿರಂತರ ಕಾಮಗಾರಿ ನಡೆದಿದ್ದು, ಕಾಮಗಾರಿಗೆ ಮಳೆ ಅಡಚಣೆ ನೀಡದ ಕಾರಣ ಸದ್ಯ ಕಾಮಗಾರಿ ಪೂರ್ಣಗೊಂಡಿದೆ.ತಡೆಗೋಡೆಗೆ ಪೇಂಟಿಂಗ್ ಕಾರ್ಯ ಮತ್ತು ಲೈನ್‌ ಹಾಕುವ ಕಾರ್ಯ ಕೂಡ ಪೂರ್ಣಗೊಂಡಿದೆ.

sk

Comments are closed.