ಕರಾವಳಿ

ಬೋಳೂರಿನಲ್ಲಿ ಸಿಸಿಬಿ ಕಾರ್ಯಾಚರಣೆ : ರೂ.1,60,000 ಮೌಲ್ಯದ ಕೋಕೆನ್ ಸಹಿತಾ ಆರೋಪಿ ಸೆರೆ

Pinterest LinkedIn Tumblr

ಮಂಗಳೂರು, ಜೂನ್.20 : ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ಅನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ & ನಾರ್ಕೋಟಿಕ್ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಬೋಳೂರು ಸುಲ್ತಾನ್ ಬತ್ತೇರಿ ರಸ್ತೆಯ ಮೋನಿಶ್ ಯಾನೆ ಮೀನಿ (36) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಮಾದಕ ವಸ್ತು ಸಹಿತಾ ರೂ. 2,81,500 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅರೋಪಿಯು ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಕೋಕೆನ್ ನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ದೊರೆತ ಮಾಹಿತಿ ಆಧರಿಸಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ಮೂಲಕ ನಗರದ ಸುಲ್ತಾನ್ ಬತ್ತೇರಿ ಬಳಿ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿವ್ ವಶದಿಂದ 16 ಗ್ರಾಂ ತೂಕದ ರೂ. 1,60,000/- ಮೌಲ್ಯದ ಬೆಲೆಬಾಳುವ ನಿಷೇಧಿತ ಮಾದಕ ವಸ್ತುವಾದ ಕೋಕೆನ್, 2 ಮೊಬೈಲ್ ಫೋನ್, ಡಿಜಿಟಲ್ ತೂಕದ ಸ್ಕೇಲ್, ಹಾಗೂ ಒಂದು ಹೊಂಡಾ ಅಕ್ಟಿವಾ ಸ್ಕೂಟರ್ ಅನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 2,81,500/-ಆಗಿರುತ್ತದೆ ಎಂದು ಪೊಲೀಸರು ತಿಳಿಸಿರುತ್ತಾರೆ.

ಈ ಮಾದಕ ವಸ್ತುವಿನ ಮಾರಾಟದ ಜಾಲದಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಯುವುದು. ಈ ಬಗ್ಗೆ ಇಕನಾಮಿಕ್ & ನಾರ್ಕೋಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಪೊಲೀಸ್ ಉಪ ಆಯುಕ್ತರವರಾದ ಹನುಮಂತರಾಯ, (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಲಕ್ಷ್ಮಿ ಗಣೇಶ್, (ಅಪರಾಧ & ಸಂಚಾರ), ರವರ ಮಾರ್ಗದರ್ಶನದಲ್ಲಿ ನಡೆದ ಪತ್ತೆ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್ ಇಕಾನಾಮಿಕ್ & ನಾರ್ಕೋಟಿಕ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಮಕೃಷ್ಣ, ಸಿಸಿಬಿ ಪಿಎಸ್ಐ ಯವರಾದ ಕಬ್ಬಾಳ್ ರಾಜ್, ಶಂಕರಿ ನಾಯರಿ ಹಾಗೂ ಸಿಬ್ಬಂದಿಗಳು ಮತ್ತು ಇಕಾನಾಮಿಕ್ & ನಾರ್ಕೋಟಿಕ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Comments are closed.