ಕರಾವಳಿ

ರನ್ ವೇಯಲ್ಲಿ ಜಾರಿದ ವಿಮಾನ ; ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪ್ಪಿದ ಬಹುದೊಡ್ಡ ದುರಂತ

Pinterest LinkedIn Tumblr

ಮಂಗಳೂರು, ಜೂನ್.30: ದುಬೈನಿಂದ ಮಂಗಳೂರಿಗೆ ಆಗಮಿಸಿದ ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ನಿಯಂತ್ರಣ ತಪ್ಪಿ ಸ್ಕಿಡ್ ಆಗಿರುವ ಘಟನೆ ಇಂದು ಸಂಜೆ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದುಬೈನಿಂದ ಮಂಗಳೂರಿಗೆ ಆಗಮಿಸಿದ ವಿಮಾನವು ರವಿವಾರ ಸಂಜೆ 5:30ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುತ್ತಿದ್ದ ವೇಳೆ ರನ್ ವೇ ಸ್ಕಿಡ್‌ ಆಗಿ ಈ ಅವಘಡ ಸಂಭವಿಸಿದೆ. ಆದರೆ ವಿಮಾನವನ್ನು ಕೂಡಲೇ ತಹಬದಿಗೆ ತರಲಾಗಿದ್ದು ಬಹುದೊಡ್ಡ ಅನಾಹುತವೊಂದು ತಪ್ಪಿದೆ.

ದುಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಮಾನ ಟರ್ಮಿನಲ್ ನಲ್ಲಿ ಟ್ಯಾಕ್ಸಿ ವೇನಲ್ಲಿ ಮುನ್ನುಗ್ಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಳಿಕ ವಿಮಾನವನ್ನು ಸುರಕ್ಷಿತ ಸ್ಥಳಕ್ಕೆ ತರಲಾಯಿತು.

Comments are closed.