
ಮಂಗಳೂರು : ಪುತ್ತೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಆತಂಕದ ವಿಷಯವಾಗಿದ್ದು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮಿತಿ ಮೀರಿದ ಡ್ರಗ್ಸ್ ಹಾವಳಿ ಇಂತಹ ದುಷ್ಕೃತ್ಯಗಳಿಗೆ ಕಾರಣವಾಗುತ್ತಿದ್ದು, ಡ್ರಗ್ಸ್ ಮಾಫಿಯಾ ನಿರ್ಮೂಲನೆಗೆ ಪೊಲೀಸರು ಮುಂದಾಗಬೇಕೆಂದು ದ.ಕ.ಸಂಸದ ನಳಿನ್ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.
ಡ್ರಗ್ಸ್ ಜಾಲಕ್ಕೆ ವಿದ್ಯಾರ್ಥಿಗಳು ಹಾಗೂ ಯುವಕರು ಬಲಿಯಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಅಮಲಿನಲ್ಲಿ ಹತ್ಯೆ ಯತ್ನ , ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಪುತ್ತೂರಿನಲ್ಲಿ ನಡೆದ ಘಟನೆಯಿಂದ ವಿದ್ಯಾರ್ಥಿಗಳ ಪೋಷಕರು ಆತಂಕಕ್ಕೀಡಾಗಿದ್ದಾರೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಡ್ರಗ್ಸ್ ಮಾಫಿಯಾವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
Comments are closed.