ಕರಾವಳಿ

ಅಡಿಕೆಯಿಂದ ದುಷ್ಪರಿಣಾಮ ಇಲ್ಲ : ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಕೇಂದ್ರ ಸಚಿವರಿಗೆ ಮನವಿ

Pinterest LinkedIn Tumblr

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಹರ್ಷವರ್ಧನ್ ಇವರನ್ನು ಭೇಟಿಮಾಡಿ ಅಡಿಕೆ ಬಳಕೆಯ ಕುರಿತು ಚುಕ್ಕೆ ರಹಿತ ಪ್ರಶ್ನೆಗೆ ಸರ್ಕಾರವು ಅಡಿಕೆಯು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ನಲ್ಲಿರುವ ಅಫಿಡವಿಟ್ ನ್ನು ಉಲ್ಲೇಖ ಮಾಡಿ ನೀಡಿದ ಉತ್ತರದ ಬಗ್ಗೆ ಸಚಿವರಿಗೆ ವಿವರಿಸಿ, ಅಡಿಕೆಯಿಂದ ಯಾವುದೇ ದುಷ್ಪರಿಣಾಮ ಇಲ್ಲ ಎಂಬುದರ ಬಗ್ಗೆ ಕೇಂದ್ರ ತೋಟ ಬೆಳೆಗಳ ಸಂಶೋಧನಾ ಸಂಸ್ಥೆಯು ಅಡಿಕೆ ಮತ್ತು ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವ ಯಾವುದೇ ಪುರಾವೆಗಳಿಲ್ಲ ಎಂದು ಹೇಳಲಾಗಿದೆ ಎಂಬುವುದು ಸಂಸದರು ಸಚಿವರಿಗೆ ಮನವೊರಿಕೆ ಮಾಡಿದರು.

ಈ ಬಗ್ಗೆ ಸ್ಪಂದಿಸಿದ ಸಚಿವರು ಅಡಿಕೆಯು ಆರೋಗ್ಯಕ್ಕೆ ಹಾನಿಕರ ಎಂದು ಹಿಂದಿನ ಯು.ಪಿ.ಎ ಸರಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವುದರಿಂದ ಈ ಅಫಿಡವಿಟ್ ನ್ನು ಹಿಂದಕ್ಕೆ ಪಡೆದುಕೊಳ್ಳುವ ಬಗ್ಗೆ ಸಚಿವರು ಭರವಸೆ ನೀಡಿದರು ಮತ್ತು ಸುಪ್ರೀಂ ಕೋರ್ಟ್ ನಿಂದ ಅಫಿಡವಿಟ್ ನ್ನು ಹಿಂದಕ್ಕೆ ಪಡೆಯಲು ಈಗಾಗಲೇ 2-3 ಬಾರಿ ಸಭೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಂಸದರ ನಿಯೋಗದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದೆ ಕುಮಾರಿ ಶೋಭಾ ಕರಂದ್ಲಾಜೆ, ದಾವಣಗೆರೆ ಸಂಸದ ಹಾಗೂ ಮಾಜಿ ಸಚಿವ ಶ್ರೀ.ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗ ಸಂಸದ ಶ್ರೀ.ನಾರಾಯಣ ಸ್ವಾಮಿ ಮುಂತಾದವರಿದ್ದರು.

Comments are closed.