ಕರಾವಳಿ

ಪಿಲಿಕುಳದಲ್ಲಿ ಮತ್ಯೋತ್ಸವ ಮತ್ತು ಕ್ಷೇತ್ರೋತ್ಸವ ; ಮೀನು ಪ್ರಿಯರಿಂದ ಬೃಹತ್ ಗಾತ್ರದ ಮೀನು ಭೇಟೆ

Pinterest LinkedIn Tumblr

ಮಂಗಳೂರು ; ಕರ್ನಾಟಕ ಸರಕಾರದ ಮೀನುಗಾರಿಕಾ ಇಲಾಖೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಮತ್ತು ಪಿಲಿಕುಳ ನಿಸರ್ಗಧಾಮದ ಆಶ್ರಯದಲ್ಲಿ ಪಿಲಿಕುಳ ಮತ್ಯೋತ್ಸವ ಮತ್ತು ಕ್ಷೇತ್ರೋತ್ಸವ ಕಾರ್ಯಕ್ರಮವು ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್ ಗಾರ್ಡನ್‌ನಲ್ಲಿ ಭಾನುವಾರದಂದು ನಡೆಯಿತು.

ಇದೇ ಸಂದರ್ಭದಲ್ಲಿ ಕೆರೆಯಲ್ಲಿ ಮೀನು ಮರಿಗಳನ್ನು ಬಿಡುವ ಕಾರ್ಯಕ್ರಮವು ಕೂಡಾ ನೆರವೇರಿತು. ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಮೀನುಮರಿಗಳ ಮತ್ತು ಒಣ ಮೀನುಗಳ ಪ್ರದರ್ಶನ ಮತ್ತು ಮಾರಾಟ ಮತ್ತು ಅಲಂಕಾರಿಕಾ ಮೀನುಗಳ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮ ಮೀನು ಪ್ರಿಯರಿಗೆ ಸುವರ್ಣಾವಕಾಶವಾಗಿತ್ತು. ಕಾರ್ಯಕ್ರಮದಲ್ಲಿ ಮತ್ಸ್ಯ ಪ್ರಿಯರು ಪಿಲಿಕುಳದ ಲೇಕ್ ಗಾರ್ಡನ್‌ನ ಕೆರೆಯಲ್ಲಿ ಬೆಳೆಸಿದ ಕಾಟ್ಲಾ, ರೋಹು, ಸಾಮಾನ್ಯ ಗೆಂಡೆ. ಬೃಹತ್ ಗಾತ್ರದ ಮುಗುಡು ಮೀನು ಸೇರಿದಂತೆ ಹಲವು ಬಗೆಯ ಮೀನುಗಳನ್ನು ಹಿಡಿದು ಸಾರ್ವಜನಿಕವಾಗಿ ಹರಾಜು ನಡೆಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದಿಂದ ಸಿಹಿ ನೀರಿನ ಮೀನುಗಳು, ಪಾಂಪ್ಲೆಟ್, ಅಂಜಲ್, ಬಂಗುಡೆ, ಸಿಗಡಿ, ಬೊಂಡಾಸು ಹಾಗೂ ಇನ್ನಿತರ ತಾಜಾ ಮೀನು ಮತ್ತು ಮೌಲ್ಯವರ್ಧಿತ ಮೀನು ಉತ್ಪನ್ನಗಳ ಮಾರಾಟದ ವ್ಯವಸ್ಥೆ ಮಾಡಲಾಗಿತ್ತು.

ಅದೇ ರೀತಿ ತಾಜಾ ಸಮುದ್ರ ಮೀನುಗಳ ಫ್ರೈ, ಫಿಶ್ ಮಸಾಲಾ, ಫಿಶ್ ಕಬಾಬ್ ಹಾಗೂ ಇನ್ನಿತರ ಮೀನಿನ ಖಾದ್ಯಗಳನ್ನು ಶುಚಿ ರುಚಿಯಾಗಿ ಸ್ಥಳದಲ್ಲೇ ತಯಾರಿಸಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿತ್ತು.

Comments are closed.