ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಮುಂಜಾಗ್ರತೆ ಕ್ರಮದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ-ಪ್ರೌಢ ಶಾಲೆಗಳಿಗೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜು.24ರಂದು ಬುಧವಾರ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರಿದಿದೆ. ಈಗಾಗಲೇ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Comments are closed.