ಕರ್ನಾಟಕ

ಸಿದ್ದಾರ್ಥ್ ಸಾವಿನ ಹಿಂದಿನ‌ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾಗಲಿ: ಸಿದ್ದರಾಮಯ್ಯ ಒತ್ತಾಯ

Pinterest LinkedIn Tumblr

ಬೆಂಗಳೂರು:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಆತ್ಮಹತ್ಯೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಘಾತ ವ್ಯಕ್ತ ಪಡಿಸಿದ್ದಾರೆ.

ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರ ಸಾವು ಎಷ್ಟು ಎಷ್ಟು ದಾರುಣವೋ, ಅದರ ಹಿನ್ನೆಲೆ ಅಷ್ಟೇ ನಿಗೂಢವಾದುದು. ಅವರನ್ನು ಇಂತಹದ್ದೊಂದು ದುರಂತಕ್ಕೆ‌ ತಳ್ಳಿದ ಕಾರಣಗಳು ಮತ್ತು ಅದರ ಹಿಂದಿನ‌ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾದರೆ ಮಾತ್ರ ಅವರಿಗೆ ನಾವು ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ವಿ.ಜಿ.ಸಿದ್ಧಾರ್ಥ ಅವರು ಕೊನೆಯಲ್ಲಿ ಬರೆದಿರುವ ಪತ್ರದಲ್ಲಿನ ವಿವರಗಳ, ಅವರ ಸಾವಿಗೆ ಐಟಿ ಇಲಾಖೆಯ ಕಿರುಕುಳ ಕಾರಣವಾಗಿರ ಬಹುದೆಂಬ ಸಂಶಯ ಹುಟ್ಟಿಸುವಂತಿದೆ‌ ಕಳೆದ ಐದು ವರ್ಷಗಳಲ್ಲಿ ಐಟಿ ಇಲಾಖೆಯ ಕಾರ್ಯ ನಿರ್ವಹಣೆ ಈ ಸಂಶಯವನ್ನು ಇನ್ನಷ್ಟು ಪುಷ್ಠೀಕರಿಸುತ್ತದೆ. ಈ ಬಗ್ಗೆ‌‌‌ ನಿಷ್ಪಕ್ಷಪಾತ ತನಿಖೆ ಆಗಲೇಬೇಕು ಎಂದು ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದಾರೆ.ಜೊತೆಗೆ ಎಸ್ ಎಂ ಕೃಷ್ಣ ಅವರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಘೋಷಿಸಿದ್ದಾರೆ.

Comments are closed.