ಕರ್ನಾಟಕ

ಹುಟ್ಟೂರಲ್ಲಿ ಸಿದ್ಧಾರ್ಥ ಅಂತ್ಯಕ್ರಿಯೆ; ಒಕ್ಕಲಿಗ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ

Pinterest LinkedIn Tumblr

ಬೆಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ, ಉದ್ಯಮಿ, ಮಾಜಿ ಸಿಎಂ ಎಸ್.​ಎಂ.ಕೃಷ್ಣ ಅಳಿಯ ವಿಜಿ ಸಿದ್ದಾರ್ಥ ಅವರ ಅಂತ್ಯ ಸಂಸ್ಕಾರ ಚಿಕ್ಕಮಗಳೂರಿನ ಚೇತನಹಳ್ಳಿಯ ಎಸ್ಟೇಟ್​ನಲ್ಲಿ ಅಂತ್ಯಕ್ರಿಯೆ ನೆರವೇರಿತು.

ಸಂಜೆ 7 ಗಂಟೆ ಸುಮಾರಿಗೆ ಪಾರ್ಥಿವ ಶರೀರಕ್ಕೆ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳನ್ನು ಸಲ್ಲಿಸಲಾಯ್ತು. ಬಳಿಕ ಸಿದ್ದಾರ್ಥ್​ ಪುತ್ರರಾದ ಅಮರ್ತ್ಯ ಹಾಗೂ ಈಷ್ಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ್ರು. ಅಂತ್ಯ ಸಂಸ್ಕಾರದಲ್ಲಿ ರಾಜಕಾರಣಿಗಳು, ಸಿನಿಮಾ ನಟರು ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ರು.

ವಿಜಿ ಸಿದ್ದಾರ್ಥ ಅವರು ಸೋಮವಾರ ರಾತ್ರಿ ಮಂಗಳೂರಿನ ಸೇತುವೆಯೊಂದರ ಬಳಿ ನಾಪತ್ತೆಯಾಗಿದ್ದು ಇಂದು ಬೆಳಗ್ಗೆ ಸಿದ್ದಾರ್ಥ ಅವರ ಮೃತದೇಹ ಪತ್ತೆಯಾಗಿತ್ತು.

ಚಿಕ್ಕಮಗಳೂರಿನಲ್ಲಿ ಅಂತ್ಯ ದರ್ಶನಕ್ಕೆ ಹಣಿ ಮಾಡಲಾಗಿತ್ತು. ಈ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದ ಬಳಿಕ ಹುಟ್ಟೂರು ಚಟ್ಟನಹಳ್ಳಿಯ ಚೇತನಹಳ್ಳಿ ಎಸ್ಟೇಟ್ ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು.

Comments are closed.