ಕರಾವಳಿ

ಸಂಸದ ನಳಿನ್‌ರಿಂದ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಪ್ರಧಾನಮಂತ್ರಿಗಳಿಗೆ ಮನವಿ

Pinterest LinkedIn Tumblr

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಇವರು ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ಪ್ರಧಾನಮಂತ್ರಿಗಳ ಆಶಯ ಯೋಜನೆಯಾದ ಮುದ್ರಾ ಮತ್ತು ಜನಧನ್ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯತ್ತಮವಾಗಿ ಅನುಷ್ಠಾನಗೊಂಡಿದ್ದು, ಈ ಬಗ್ಗೆ ಯೋಜನೆಯ ಪ್ರಗತಿ ವರದಿಯನ್ನು ಪ್ರಧಾನಮಂತ್ರಿಗಳಿಗೆ ಹಸ್ತಾಂತರಿಸಿದರು.

ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗಬೇಕಾಗಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಂಸದರ ಮನವಿಗೆ ಸ್ಪಂಧಿಸಿದ ಪ್ರಧಾನಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ಜಿಲ್ಲೆಯ ಜನತೆಯ ಮೇಲೆ ನನಗೆ ಅತಿಯಾದ ಪ್ರೀತಿಯಿದೆ ಎಂದು ಪ್ರತಿಕ್ರಿಯಿಸಿದರು.

ಮನವಿಯ ಬಗ್ಗೆ ತಕ್ಷಣ ಅಧಿಕಾರಿಗಳ ವಿಶೇಷ ಸಬೆ ಕರೆದು ಮುಂದಿನ ದಿನಗಳಲ್ಲಿ ಈ ಯೋಜನೆಗಳ ಅನುಷ್ಠಾನಕ್ಕೆ ಸಹಕರಿಸುವುದಾಗಿ ಹಾಗೂ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಪ್ರಧಾನಮಂತ್ರಿಗಳು ತಿಳಿಸಿದರು ಹಾಗೂ ಸಂಸದರ ಕಾರ್ಯವೈಖರಿಯ ಬಗ್ಗೆ ಸಂಸದರನ್ನು ಅಭಿನಂದಿಸಿದರು.

Comments are closed.