ಕರಾವಳಿ

18 ಪೇಟೆಯ ದೇವಳ ಮಂಜೇಶ್ವರದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

Pinterest LinkedIn Tumblr

ಮಂಗಳೂರು : ತುಳುನಾಡಿನಲ್ಲಿ ಹಿಂದಿನಿಂದಲೂ ನಾಗದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಸೋಮವಾರ ನಾಗರಪಂಚಮಿ ಪ್ರಯುಕ್ತ ಕಾಸರಗೋಡಿನ ಮಂಜೇಶ್ವರದ ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತರು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಗೆ ಗರುಡಪಂಚಮಿ ಮತ್ತು ನಾಗರ ಪಂಚಮಿ ಎಂದು ಹೆಸರಿದೆ. ನಾಗರ ಪಂಚಮಿಯಂದು ಅಕ್ಕಿ, ತೆಂಗಿನಕಾಯಿ ಇಟ್ಟು ನಾಗರ ಕಲ್ಲಿಗೆ ಪಂಚಾಮೃತ ಅಭಿಷೇಕ ಮಾಡಿ ಆರಾಧಿಸುವ ಸಂಪ್ರದಾಯವಿದೆ.

ಮಂಜೇಶ್ವರದಲ್ಲಿ ನಾಗಪಂಚಮಿಯಂದು ಸಾವಿರಾರು ಭಕ್ತರು ಆಗಮಿಸಿ ಶ್ರದ್ಧಾ ಭಕ್ತಿಯಿಂದ ದೇವರಿಗೆ ಪೂಜೆ ಸಲ್ಲಿಸಿದರು. ಬುಧವಾರ ಬೆಳಗ್ಗೆಯಿಂದ ಸುರಿಯುತ್ತಿದ್ದ ಮಳೆಯ ನಡುವೆಯೇ ಸಾವಿರಾರು ಭಕ್ತಾದಿಗಳು ಮಂಜೇಶ್ವರದ ಅನಂತೇಶ್ವರ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಆವರಣದಲ್ಲಿರುವ ನಾಗರಕಟ್ಟೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ, ಶ್ರದ್ಧಾ ಭಕ್ತಿಯಿಂದ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು. ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಮಾಡಿದರು.

ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿ ಪಡೆದಿರುವ ಅನಂತೇಶ್ವರ ದೇವಾಲಯಕ್ಕೆ ನಾಗರ ಪಂಚಮಿಯಂದು ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಆಗಮಿಸಿದ ಭಕ್ತರು ನಾಗರ ಕಲ್ಲಿಗೆ ಪಂಚಾಮೃತ ಮತ್ತು ಕ್ಷೀರಾಭಿಷೇಕ ಮಾಡಿದರು. ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯಕ್ಕೆ ಮಂಗಳೂರು, ಉಡುಪಿ ,ಕುಂದಾಪುರ , ಪುತ್ತೂರು , ಹಾಸನ, ಮಡಿಕೇರಿ, ಮುಂಬೈ , ಬೆಂಗಳೂರು , ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

ನಾಗರ ಪಂಚಮಿ ಹಬ್ಬ ವನ್ನು ಭಾರತದ ಹಲವು ಭಾಗಗಳಲ್ಲಿ ಹಿಂದುಗಳು ಆಚರಿಸುತ್ತಾರೆ. ಆದರೆ ಕರ್ನಾಟಕದಲ್ಲಿ ಇದಕ್ಕೆ ಮತ್ತಷ್ಟು ಮಹತ್ವದ ಸ್ಥಾನವಿದೆ. ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ.

ಈ ದಿನ ಶೇಷ ನಾಗ ಮತ್ತು ಶ್ರೀ ವಿಷ್ಣುವನ್ನು ಭಕ್ತಿಯಿಂದ ಸ್ತುತಿಸಲಾಗುತ್ತದೆ. ತುಳುನಾಡಿನಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ ಪರಶುರಾಮ ಸೃಷ್ಟಿಯ ತುಳುನಾಡು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಗರಪಂಚಮಿಯನ್ನು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು.

ದೇವಸ್ಥಾನದಲ್ಲಿ ಮುಂಜಾನೆಯೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರತಿ ಸಾಲಿನಲ್ಲಿ ನಿಂತು ನಾಗ ದೇವನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಪಾರ್ಥನೆ ನೇರವೇರಿಸಿದರು. ನಾಗ ಬನದಲ್ಲಿ ನಾಗದೇವರಿಗೆ ದೇವಾಳದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಹಾಲು, ಕ್ಷೀರಾ, ತುಪ್ಪ, ಜೇನಿನೊಂದಿಗೆ ಪಂಚಾಮೃತ ಆಭಿಷೇಕವನ್ನು ಮಾಡಿ ವಿಶೇಷ ಪೂಜೆ ನೆರವೇರಿಸಿದರು.

ಚಿತ್ರಗಳು : ಮಂಜು ನೀರೇಶ್ವಾಲ್ಯ

Comments are closed.