ಕರಾವಳಿ

ಕೋಡಿ, ಹಳೆಅಳಿವೆ ಕಡಲ್ಕೊರೆತ ಪ್ರದೇಶಕ್ಕೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿ

Pinterest LinkedIn Tumblr

ಕುಂದಾಪುರ: ಕಳೆದ‌‌ ಕೆಲವು ದಿನಗಳಿಂದ ಕೋಟೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ‌ಅಳಿವೆ ಹಾಗೂ ಕುಂದಾಪುರ ಪುರಸಭಾ ವ್ಯಾಪ್ತಿಯ ಕೋಡಿಯ ಎಂ ಕೋಡಿ, ಮದ್ಯ ಕೋಡಿ, ಕೋಡಿ ತಲೆ ಪ್ರದೇಶದಲ್ಲಿ ತೀವ್ರ ಕಡಲ ಕೊರೆತ ಸಂಭವಿಸಿದ್ದು ಕುಂದಾಪುರ ‌ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನದ ಸುಮಾರಿಗೆ ಸ್ಥಳೀಯ ಮುಖಂಡರ‌ ಜೊತೆ ಕಡಲ್ಕೊರೆತ ಪ್ರದೇಶಕ್ಕೆ ಶಾಸಕರು ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದರು.

ರಾಜ್ಯಾದ್ಯಂತ ತೀವ್ರ ಮಳೆ ಹಾಗೂ ಪ್ರವಾಹ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕೂಡ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಕಡಲ್ಕೊರೆತ, ನೆರೆ ಹಾವಳಿ ಇದ್ದು ಜಿಲ್ಲೆಯ ಶಾಸಕರು ಮುತುವರ್ಜಿಯಿಂದ ಕೆಲಸ ಮಾಡುತ್ತಿದ್ದಾರೆ.

ಉಡುಪಿಯಲ್ಲಿ ಎಲ್ಲಾ ಶಾಸಕರ ನೇತೃತ್ವ ಸಂಸದೆ‌ ಶೋಭಾ ಕರಂದ್ಲಾಜೆ ಅಧಿಕಾರಿಗಳ ಸಭೆ ನಡೆಸಿದ್ದಾರೆ.

(ವರದಿ- ಯೋಗೀಶ್ ಕುಂಭಾಸಿ)

Comments are closed.