
ಮಂಗಳೂರು, ಆಗಸ್ಟ್.10: ಮಂಗಳೂರಿನಲ್ಲಿ ಇಂದು ಅಯೋಜಿಸಲಾಗಿದ್ದ ಹಿರಿಯ ಸ್ವಾತಂತ್ರ ಹೋರಾಟಗಾರ, ಕರ್ನಾಟಕ ಏಕೀಕರಣ ಚಳವಳಿಯ ಧುರೀಣ ಬಿ.ವಿ.ಕಕ್ಕಿಲ್ಲಾಯರ ಜನ್ಮಶತಾಬ್ದಿ ಕಾರ್ಯಕ್ರಮದಲ್ಲಿ ದೇಶದ ಬಗ್ಗೆ ಅನುಚಿತವಾಗಿ ಮಾತನಾಡುವ ದೇಶವೀರೋಧಿ ಕನ್ಹಯ್ಯ ಕುಮಾರ್ ಭಾಗವಹಿಸಬಾರದು ಎಂದು ಆಗ್ರಹಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಂದನಕ್ಕೊಳಕ್ಕಾಗಿದ್ದಾರೆ.
ಬಿ.ವಿ.ಕಕ್ಕಿಲ್ಲಾಯರ ಜನ್ಮ ಶತಾಬ್ದಿ ಅಂಗವಾಗಿ ಶನಿವಾರ ನಗರದ ಬಲ್ಮಠದ ಸಹೋದಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇಂದಿನಿಂದ ಎರಡು ದಿನಗಳ ನಡೆಯಲಿರುವ ಈ ಕಾರ್ಯಕ್ರಮದ ಮೊದಲದಿನವಾದ ಇಂದು ಮುಖ್ಯ ಭಾಷಣಕಾರರಾಗಿ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ನನ್ನು ಅಹ್ವಾನಿಸಲಾಗಿತ್ತು.
ಆದರೆ ದೇಶವಿರೋಧಿ ಹೇಳಿಕೆ ನೀಡುತ್ತಿರುವ ಕನ್ಹಯ್ಯ ಕುಮಾರ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸುವುದನ್ನು ವಿರೋಧಿಸಿ ಸಂಘ ಪರಿವಾರ ಈ ಹಿಂದೆಯೇ ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಹರಿಯಬಿಟ್ಟಿತ್ತು.

ಆದರೆ ಇವರ ಯಾವೂದೇ ವಿರೋಧಗಳನ್ನು ಲೆಕ್ಕಿಸದೆ ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಕನ್ಹಯ್ಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಆರಂಭಿಸುತ್ತಿದ್ದಂತೆ ಎಬಿವಿಪಿ ಕಾರ್ಯಕರ್ತರೆನ್ನಲಾದ ಕೆಲವ ಮಂದಿ ಸಭಾಂಗಣದೊಳಗೆ ಪ್ರವೇಶಿಸಿ ಭಾಷಣಕ್ಕೆ ಆಡ್ಡಿಪಡಿಸಲು ಮುಂದಾಗಿದ್ದರು ಎನ್ನಲಾಗಿದೆ.
ಈ ವೇಳೆ ಪೊಲೀಸರು ಭಾಷಣಕ್ಕೆ ಅಡ್ಡಿಪಡಿಸಲು ಬಂದಂತಹವರನ್ನು ವಶಕ್ಕೆ ಪಡೆದರು. ಈ ವೇಳೆ ಸಭಾಂಗಣದ ಹೊರಗೆ ಜಮಾಯಿಸಿದ್ದ ಸಾವಿರಾರು ಮಂದಿ ಎಬಿವಿಪಿ, ರಾಮ ಸೇನೆ, ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕನ್ನಯ್ಯಾ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು.

ಕನ್ಹಯ್ಯ ಕುಮಾರ್

ಇದೇ ವೇಳೆ ಸಭಾಂಗಣದದ ಹೊರಗೆ ಪ್ರತಿಭಟನೆಗೆ ಯತ್ನಿಸಿದ ಹಿಂದೂಪರ ಸಂಘಟನೆಯ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು.
Comments are closed.