ಕರಾವಳಿ

ಮಂಗಳೂರು ಸೇರಿದಂತೆ ಜಿಲ್ಲೆಯ 5 ತಾಲೂಕುಗಳು ಪ್ರವಾಹ ಪೀಡಿತ ಘೋಷಣೆ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಪುತ್ತೂರು, ಸುಳ್ಯ ಸೇರಿದಂತೆ ಐದು ತಾಲೂಕುಗಳನ್ನು ತಕ್ಷಣವೇ ಜಾರಿ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಆ. 1ರಿಂದ 9ರವರೆಗೆ ಅತಿವೃಷ್ಠಿಯಿಂದ ಉಂಟಾದ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಐದು ತಾಲೂಕುಗಳನ್ನು ಪ್ರವಾಹಪೀಡಿತ ಪ್ರದೇಶಗಳೆಂದು ರಾಜ್ಯ ಸರಕಾರವು ಘೋಷಿಸಿ ಆದೇಶ ಹೊರಡಿಸಿದೆ.

ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸುವ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರಕಾರವು ಸೂಚಿಸಿದೆ.

Comments are closed.