ಕರಾವಳಿ

ಪಾಲಿಕೆ ವ್ಯಾಪ್ತಿಯಲ್ಲಿ ಮತ್ತೆ ಡೆಂಗ್ಯೂ ಹಾವಾಳಿ : ಪರಿಶೀಲನೆ ಸಂದರ್ಭ ಸೊಳ್ಳೆ ಉತ್ಪತ್ತಿ ತಾಣ ಕಂಡು ಬಂದರೆ ದಂಡ

Pinterest LinkedIn Tumblr

ಮಂಗಳೂರು ಆಗಸ್ಟ್ 17 : ಮಂಗಳೂರು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ನಿಯಂತ್ರಣಕ್ಕಾಗಿ ಸತತವಾಗಿ 20 ದಿನಗಳಿಂದ, ಡೆಂಗ್ಯೂ ಸೊಳ್ಳೆಗಳು ಉತ್ಪತ್ತಿಯಾಗುವ ತಾಣಗಳನ್ನು ಗುರುತಿಸಿ ನಾಶಪಡಿಸಿ ಚರಂಡಿಗಳ ಸ್ವಚ್ಚತೆ ಮತ್ತು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮನೆಗಳಲ್ಲಿನ ತಾರಸಿ, ಹೂಕುಂಡಗಳು ಹಾಗೂ ಇತರ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ಸಾರ್ವಜನಿಕರಲ್ಲಿ ಈಗಾಗಲೇ ತಿಳಿಸಲಾಗಿದೆ. ಈ ಬಗ್ಗೆ ಅಗತ್ಯವಿರುವ ಸ್ಥಳಗಳಲ್ಲಿ ಫಾಗಿಂಗ್ ಕೂಡ ಮಾಡಲಾಗುತ್ತಿದೆ. ಆದರೂ ಕೂಡ ಸಾರ್ವಜನಿಕರು ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸದೆ, ತಮ್ಮ ಮನೆಗಳಲ್ಲಿಯೇ ಇರುವ ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ಗಮನ ಹರಿಸದೆ ತಮ್ಮ ಕುಟುಂಬದವರಿಗೆ ಹಾಗೂ ನೆರೆಹೊರೆಯವರಿಗೆ ಮತ್ತೆ ಮತ್ತೆ ಡೆಂಗ್ಯೂಜ್ವರ ಹರಡಲು ಕಾರಣವಾಗುತ್ತಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ.

ಆದ ಕಾರಣ ಮಂಗಳೂರು ಮಹಾನಗರಪಾಲಿಕೆ ಹಾಗೂ ಆರೋಗ್ಯಇಲಾಖೆಯ ವತಿಯಿಂದ ಪ್ರತಿ ಮನೆ, ಅಂಗಡಿ, ಅಪಾರ್ಟ್‍ಮೆಂಟ್‍ಗಳ ಸ್ಥಳ ಪರಿಶೀಲನಾ ಸಂದರ್ಭದಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು. ಮಂಗಳೂರು ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆಯ ಸೂಚನೆಯನ್ನು ಪಾಲಿಸದೆ ಇದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.

Comments are closed.