ಕರಾವಳಿ

ನಳಿನ್ ‌ಕುಮಾರ್ ಕಟೀಲ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ : ಮಂಗಳೂರಿನಲ್ಲಿ ಸಂಭ್ರಮಾಚರಣೆ

Pinterest LinkedIn Tumblr

ಮಂಗಳೂರು,ಆಗಸ್ಟ್.20: ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ‌ಕುಮಾರ್ ಕಟೀಲ್ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಹಿನ್ನೆಲೆಯಲ್ಲಿ ನೇಮಕ ಆದೇಶ ಹೊರಬೀಳುತ್ತಿದ್ದಂತೆ ಮಂಗಳೂರಿನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಸಂಸದ ನಳಿನ್ ‌ಕುಮಾರ್ ಕಟೀಲ್

ಸಂಸದ ನಳಿನ್ ‌ಕುಮಾರ್ ಕಟೀಲ್ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿರುವ ಮಾಹಿತಿ ಲಭಿಸಿದ ಕೂಡಲೇ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ಕೊಡಿಯಾಲ್ ಬೈಲ್‌ನಲ್ಲಿರುವ ಅಟಲ್ ಸೇವಾ ಕೇಂದ್ರದ ಮುಂಭಾಗ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.

Comments are closed.