ಕರಾವಳಿ

ಮಂಗಳೂರು ದಕ್ಷಿಣ ಮತ್ತು ಉತ್ತರ ಕ್ಷೇತ್ರಗಳ ಸಮಗ್ರ ಅಭಿವೃದ್ಧಿ ಬಗ್ಗೆ ಶಾಸಕಧ್ವಯರಿಂದ ಮುಖ್ಯಮಂತ್ರಿಗಳಿಗೆ ಮನವಿ

Pinterest LinkedIn Tumblr

ಮಂಗಳೂರು : ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಬೆಂಗಳೂರಿನಲ್ಲಿ ಶಾಸಕರಾದ ಡಿ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮಂಗಳೂರಿನ ಸಮಗ್ರ ಅಭಿವೃದ್ಧಿಗಳಲ್ಲಿ ಮುಖ್ಯವಾಗಿರುವ ಒಳಚರಂಡಿ ವ್ಯವಸ್ಥೆ, ಮುಖ್ಯರಸ್ತೆ ಹಾಗೂ ಒಳರಸ್ತೆಗಳ ಅಭಿವೃದ್ಧಿ, ಪ್ರವಾಸೋದ್ಯಮ ಅಭಿವೃದ್ಧಿ, ಹೆಲ್ತ್ ಟೂರಿಸಂ ಸಹಿತ ಪಾಲಿಕೆಯ ವ್ಯಾಪ್ತಿಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ವ್ಯವಸ್ಥೆ, ನೆರೆ ಪರಿಹಾರ ಅನುದಾನ ಸಹಿತ ಅನೇಕ ಯೋಜನೆಗಳ ಬಗ್ಗೆ ರಾಜ್ಯ ಸರಕಾರದ ಅನುದಾನದ ಬೇಡಿಕೆಗಳನ್ನು ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲ್ಲಿಸಿದರು.

Comments are closed.