
ಮಂಗಳೂರು / ಉಳ್ಳಾಲ, ಆಗಸ್ಟ್.29: ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆಯಲ್ಲಿ ಗುರುವಾರ ನಡೆದಿದೆ.
ಆತ್ಮಹತ್ಯೆಗೈದ ಯುವಕನನ್ನು ಕಂಕನಾಡಿಯ ಖಾಸಗಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿಗಳಾದ ಕಮಲಾಕ್ಷ ಹಾಗೂ ಶ್ರೀಮತಿ ಪದ್ಮಾಕ್ಷಿ ದಂಪತಿಗಳ ಪುತ್ರ ನಗರದ ಸಂತ ಅಲೋಶಿಯಸ್ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿ ಪ್ರತೀಕ್ (18 ) ಎಂದು ಗುರುತಿಸಲಾಗಿದೆ.
ಪ್ರತೀಕ್ ಗುರುವಾರ ತರಗತಿಗೆ ರಜೆ ಎಂದು ಮನೆಯಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ಆತನ ಪೋಷಕರು ಸಂಜೆ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಪೊಲೀಸ್ ತನಿಖೆಯಿಂದ ಇನ್ನಷ್ಟೇ ತಿಳಿದು ಬರಬೇಕಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Comments are closed.