ಕರಾವಳಿ

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಓಂಕಾರ ನಗರದ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ

Pinterest LinkedIn Tumblr

ಮಂಗಳೂರು : ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಾರ್ವಜನಿಕ ಶ್ರೀ ಗಣೇಶೋತ್ಸವವು ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಮತ್ತು ತಾಲೂಕು ಬಂಟರ ಸಂಘ ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ಬಂಟರ ಮಾತೃ ಸಂಘ ಹಾಗೂ ದ.ಕ, ಉಡುಪಿ, ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಇತರ ಸಂಘ- ಸಂಸ್ಥೆಗಳ ಹಾಗೂ ಎಲ್ಲಾ ಜಾತಿ-ಮತ ಬಾಂಧವರ ಸಹಕಾರದೊಂದಿಗೆ ಶ್ರದ್ಧಾ ಭಕ್ತಿಯೊಂದಿಗೆ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್‌ಹಾಸ್ಟೆಲ್ ಇದರ 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.1ರಿಂದ 4ರವರೆಗೆ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸೆ.2ರಂದು ಸೋಮವಾರ ಬೆಳಿಗ್ಗೆ ೮ ಗಂಟೆಗೆ ಸ್ಥಳ ಶುದ್ಧಿ, ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ, ಬಳಿಕ ಧ್ವಜಾರೋಹಣ, ಮೂರ್ತಿ ಪ್ರತಿಷ್ಠೆ, ಗಣಹೋಮದೊಂದಿಗೆ ಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿತು.

ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಮಾಲಾಡಿ ಅಜಿತ್ ಕುಮಾರ್ ರೈ ಅವರ ನೇತ್ರತ್ವದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮದ ಕಾರ್ಯಕ್ರಮಗಳ ಉದ್ಘಾಟನೆಯನ್ನು ಮಂಗಳೂರಿನ ಕನ್ಸಲ್ಟಿಂಗ್ ಇಂಜಿನಿಯರ್ ಬಿ.ಪದ್ಮನಾಭ ರೈ ಹಾಗೂ ಶ್ರೀಮತಿ ಪಿ.ರೈ ದಂಪತಿಗಳು ಉದ್ಘಾಟಿಸಿದರು. ಕ್ಯಾಪ್ಟನ್ ವಿ. ದೀಪಕ್ ಅಡ್ಯಂತಾಯ ಇವರು ಧ್ವಜಾರೋಹಣ ನೆರವೇರಿಸಿದರು.

ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಂಚಾಲಕಿ ಡಾ.ಆಶಾಜ್ಯೋತಿ ರೈ,ಬಂಬ್ರಾಣ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ ಅಡ್ಯಾರ್, ಕೋಶಾಧಿಕಾರಿ ಉಮೇಶ್ ರೈ ಮೇಗಿನಮನೆ, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ವಶಂತ್ ಶೆಟ್ಟಿ, ಮಹಿಳಾ ವಿಭಾಗದ ಗೌರವಾಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮೀ ಎಸ್.ಹೆಗ್ಡೆ, ಅಡ್ಯಾರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಇವರು ಸ್ವಾಗತಿಸಿ, ಪ್ರಸ್ತಾವನೆಗೈದರು. ಸತೀಶ್ ಶೆಟ್ಟಿ ಕೊಡಿಯಾಲ್ ಬೈಲ್, ಹಾಗೂ ಶರತ್ ಶೆಟ್ಟಿ ಪಡುಪಳ್ಳಿ ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ರೈ ಮೇಗಿನಮನೆ ವಂದಿಸಿದರು.

ಗಣೇಶೋತ್ಸವ ಕಾರ್ಯಕ್ರಮಗಳು:

ತೆನೆ ವಿತರಣೆ, ಸಿತಾರ್ ಮಾಂತ್ರಿಕ ಶ್ರೀ ಕೊಚ್ಚಿಕಾರ್ ದೇವದಾಸ್ ಪೈಯವರಿಂದ ಭಕ್ತಿಗೀತೆಗಳು ಭಜನಾ ಸೇವೆ, ಮಧ್ಯಾಹ್ನ ಮಹಾಪೂಜೆ, ಅಪರಾಹ್ನ 2.30ರಿಂದ ಬಂಟ ಸಮಾಜ ಬಾಂಧವರಿಂದ ಭಾರತೋತ್ಸವ ಕಾರ್ಯಕ್ರಮಗಳು ಜರಗಿತು.

ಸಂಜೆ 5ರಿಂದ 7ರವರೆಗೆ ಧಾರ್ಮಿಕ ಸಭೆ ನಡೆಯಿತು. 7.30ರಿಂದ ರಂಗಪೂಜೆ, ಮಹಾಪೂಜೆ ನಡೆಯಿತು. ರಾತ್ರಿ 8 ರಿಂದ ಸಮಾಜ ಬಾಂಧವರಿಂದ ಭಾರತೋತ್ಸವ ಕಾರ್ಯಕ್ರಮಗಳು ಮುಂದುವರಿಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪ್ರತಿ ವರುಷದಂತೆ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಉದ್ಯಮ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಬಾಂಧವರನ್ನು ಗೌರವಿಸಿ ಸತ್ಕರಿಸಲಾಯಿತು.

Comments are closed.