ಕರಾವಳಿ

ಮುಲ್ಕಿ-ಸುರತ್ಕಲ್ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ : ಸ್ಕಾರ್ಪಿಯೋ ಕಾರಿನಲ್ಲಿದ್ದ ವಿದ್ಯಾರ್ಥಿನಿ ಮೃತ್ಯು – 9 ಮಂದಿಗೆ ಗಾಯ

Pinterest LinkedIn Tumblr

ಮಂಗಳೂರು,ಸೆಪ್ಟಂಬರ್.07: ಸ್ಕಾರ್ಪಿಯೋ ಕಾರೊಂದು ರಸ್ತೆ ವಿಭಜಕವನ್ನು ದಾಟಿಕೊಂಡು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಸುರತ್ಕಲ್ – ಮುಲ್ಕಿ ಮದ್ಯೆ ಮುಕ್ಕ ಪಾವಂಜೆ ಚೆಕ್ ಪೋಸ್ಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಯನ್ನು ಕಾರಿನಲ್ಲಿದ್ದ ಮಣಿಪಾಲ ಎಜುಕೇಷನ್ ಅಕಾಡೆಮಿಯ ಇಂಟೀರಿಯರ್ ಡಿಸೈನಿಂಗ್ ವಿಭಾಗದ ವಿದ್ಯಾರ್ಥಿನಿ ಗ್ಲೋರಿಯಾ (24) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ಸೇರಿ 9 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂಟು ವಿದ್ಯಾರ್ಥಿಗಳು ಕಾರಿನಲ್ಲಿ ಮಣಿಪಾಲದತ್ತ ಹೋಗುತ್ತಿದ್ದರು. ಈ ಸಂದರ್ಭ ಮುಕ್ಕ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ, ಮಂಗಳೂರಿನತ್ತ ಬರುತ್ತಿದ್ದ ಲಾರಿಗೆ ಗುದ್ದಿದೆ. ಅಪಘಾತದಲ್ಲಿ ಸ್ಕಾರ್ಪಿಯೋ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸ್ಕಾರ್ಪಿಯೋ ಚಾಲಕ ಅವನತ್ ಮತ್ತು ಮಣಿಪಾಲ ಎಜುಕೇಷನ್ ಅಕಾಡೆಮಿ ಕಾಲೇಜಿನ ವಿದ್ಯಾರ್ಥಿಗಳಾದ ಅಪರ್ಣಾ, ಅಂಕಿತಾ, ಗಾಯತ್ರಿ, ಸುಚಲಿತಾ, ರೇಖಾ, ಅನಿತಾ, ಮೇರಿಟಾ ಗಾಯಗೊಂಡವರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಸೇರಿದಂತೆ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸುರತ್ಕಲ್ ಹಾಗೂ ಮುಲ್ಕಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.