ಕರಾವಳಿ

ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ರೋಟಾ ವೈರಸ್ ಲಸಿಕೆ ಚಾಲನೆ

Pinterest LinkedIn Tumblr

ಮಂಗಳೂರು ಸೆಪ್ಟಂಬರ್ 12 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ದಲ್ಲಿ ರೋಟಾವೈರಸ್ ಲಸಿಕೆ ನೀಡಿಕೆಗೆ ಗುರುವಾರ ಚಾಲನೆ ನೀಡಲಾಯಿತು.

ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ರಾಮಕೃಷ್ಣ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೆನ್ಲಾಕ್ ಅಧೀಕ್ಷಕಿ ಡಾ|| ರಾಜೇಶ್ವರಿ ದೇವಿ ರೋಟಾ ವೈರಾಸ್ ಲಸಿಕೆಯನ್ನು ಮಗುವಿಗೆ ನೀಡುವ ಮೂಲಕ ಚಾಲನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞರಾದ ಡಾ|| ಶೈಲಜ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ, ಜಿಲ್ಲಾ ಶುಶ್ರೂಷಣಾಧಿಕಾರಿ ಲಿಸ್ಸಿ , ಇಲಾಖಾ ಅಧಿಕಾರಿ ಸಿಬ್ಬಂಧಿಯವರು ಉಪಸ್ಥಿತರಿದ್ದರು.

Comments are closed.