ಕರಾವಳಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈ ಯಾನಿಯ ಬಂಧನ : ಲಕ್ಷಾಂತರ ರೂ. ಮೌಲ್ಯದ ವಿದೇಶಿ ಕರೆನ್ಸಿ ವಶ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್,16: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಕ್ಷಾಂತರ ರೂ. ಮೌಲ್ಯದ ವಿದೇಶಿ ಕರೆನ್ಸಿ ಸಹಿತಾ ದುಬೈಗೆ ತೆರಳಲು ಯತ್ನಿಸಿದ ಪ್ರಯಾಣಿಕನನ್ನು ಸಿಐಎಸ್‌ಎಫ್ ಸಿಬ್ಬಂದಿ ಬಂಧಿಸಿದ್ದು, ಅತನಿಂದ 5.88 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಹ್ಯಾರಿ ಸ್ಟೆಫನ್ ಆಯಂತೋನಿ ಡಿಸೋಜ ಎಂದು ಗುರುತಿಸಲಾಗಿದೆ.

ರವಿವಾರ ಸಂಜೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ತೆರಳಲು ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ತಪಾಸಣೆ ನಡೆಸಿದರು. ಈ ವೇಳೆ ಪ್ರಯಾಣಿಕನಿಂದ 2.93 ಲಕ್ಷ ರೂ. ಮೌಲ್ಯದ ದಿರ್ಹಮ್, 2.94 ರೂ. ಮೌಲ್ಯದ ಡಾಲರ್ ವಿದೇಶಿ ಕರೆನ್ಸಿಯನ್ನು ಸಿಐಎಸ್‌ಎಫ್ ಸಿಬ್ಬಂದಿಗಳು ವಶಪಡಿಸಿಕೊಂಡರು.ಇದರ ಒಟ್ಟು ಮೌಲ್ಯ 5.88 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈತನನ್ನು ಹೆಚ್ಚಿನ ವಿಚಾರಣೆಗಾಗಿ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು,ಈ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Comments are closed.