ಕರಾವಳಿ

ಹಲ್ಲೆ, ಕೊಲೆಯತ್ನ ಮತ್ತು ಡರೋಡೆ ಪ್ರರಕಣ : ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Pinterest LinkedIn Tumblr

ಮಂಗಳೂರು, ಸೆಪ್ಟಂಬರ್.17 : ಸುಮಾರು ಒಂದೂವರೇ ವರ್ಷದಿಂದ ತಲೆಮರೆಸಿಕೊಂಡಿದ್ದ ಹಲ್ಲೆ, ಕೊಲೆಯತ್ನ ಮತ್ತು ಡರೋಡೆ ಪ್ರರಕಣದ ಆರೋಪಿ ಯನ್ನು ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ತೊಕ್ಕೊಟ್ಟು ಒಳಪೇಟೆಯ ಕವಿತ್ ಪೂಜಾರಿ (29) ಎಂದು ಗುರುತಿಸಲಾಗಿದೆ.

ಈತನ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ ಮತ್ತು ಡರೋಡೆ ಪ್ರರಕಣ ಸೇರಿದಂತೆ ಸುಮಾರು 6 ಪ್ರಕರಣಗಳು ದಾಖಲಾಗಿರುತ್ತದೆ. ಉಳ್ಳಾಲ ಪೊಲೀಸ್ ಠಾಣೆಯ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದು, ಆರೋಪಿಯ ಪತ್ತೆಯ ಬಗ್ಗೆ ನ್ಯಾಯಾಲಯವು ಈತನ ಮೇಲೆ ವಾರಂಟು ಹೊರಡಿಸಿಲಾಗಿತ್ತು. ಆರೋಪಿಯನ್ನು ಮುಂದಿನ ಕ್ರಮದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ:ಪಿ.ಎ.ಹರ್ಷಾ ರವರ ನಿರ್ದೇಶನದಂತೆ, ಅರುಣಾಂಕ್ಷು ಗಿರಿ, ಐಪಿಎಸ್‌ ಡಿ.ಸಿ.ಪಿ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಲಕ್ಷ್ಮೀ ಗಣೇಶ್, ಡಿ.ಸಿ.ಪಿ (ಅಪರಾಧ ಮತ್ತು ಸಂಚಾರ ವಿಭಾಗ) ರವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಟಿ.ಕೋದಂಡರಾಮ್ ರವರ ಆದೇಶದಂತೆ ದಕ್ಷಿಣ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Comments are closed.